ಮಡಿಕೇರಿ, ಜೂ.೨೪: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ತಾ.೨೫ ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟಿçÃಯ ಲೋಕ್ ಅದಾಲತ್’ ನಡೆಯಲಿದೆ.

ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಆರ್ಥಿಕ ವಸೂಲಾತಿ ಪ್ರಕರಣಗಳು. ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಎಲ್ಲಾ ರೀತಿಯ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ. ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬAಧಿಸಿದ ಕ್ಲೇಮುಗಳು. ವಿದ್ಯುತ್ ಹಾಗೂ ನೀರಿನ ಶುಲ್ಕಗಳು (ನಾನ್ ಕಾಂಪೌAಡಬಲ್ ಹೊರತುಪಡಿಸಿ). ಮೈನ್‌ಟೆನೆನ್ಸ್ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಇತರ ಪ್ರಕರಣಗಳು ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ವಿವರಿಸಿದರು.