ಮಡಿಕೇರಿ, ಜೂ. ೨೪: ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಸರಕಾರ ಹತ್ತು ಹಲವು ಜನೋಪಯೋಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇದನ್ನು ಎಲ್ಲಾ ವರ್ಗದ ಜನರಿಗೆ ಮುಟ್ಟಿಸುವ ಜವಾಬ್ದಾರಿ ಬಿಜೆಪಿ ಕಾರ್ಯಕರ್ತರದ್ದಾಗಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖಗೊಳ್ಳಬೇಕೆಂದು ಮಡಿಕೇರಿ ಶಾಸಕ ಮಂಡೇಪAಡ ಅಪ್ಪಚ್ಚು ರಂಜನ್ ಹಾಗೂ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಕರೆ ನೀಡಿದರು.

ನಗರದ ಓಂಕಾರ ಸದನದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರಕೋಷ್ಠಗಳ ಜಿಲ್ಲಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅಪ್ಪಚ್ಚು ರಂಜನ್, ಭಾರತೀಯ ಜನತಾ ಪಕ್ಷ ೨೪ ಪ್ರಕೋಷ್ಠಗಳನ್ನು ಹೊಂದಿವೆ. ಇದರಿಂದ ಎಲ್ಲಾ ವರ್ಗಕ್ಕೂ ಪಕ್ಷ ತಲುಪಿದೆ. ಪಕ್ಷ ಸಂಘಟನೆ ಮಾಡಿದ ಫಲವಾಗಿ ಇಂದು ಗಟ್ಟಿಯಾಗಿ ನೆಲೆಯೂರಿದೆ. ಸರಕಾರದ ಸಾಧನೆಯನ್ನು ಮನೆ ಹಾಗೂ ಮನಕ್ಕೆ ಮುಟ್ಟಿಸುವ ಕೆಲಸವಾಗಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಜಾಗತಿಕ ಮನ್ನಣೆ ತಂದಿದ್ದಾರೆ. ವಿಶ್ವಗುರುವಾಗಿ ಭಾರತ ಹೊರಹೊಮ್ಮಿದೆ. ಆರ್ಟಿಕಲ್ ೩೭೦ ರದ್ದು ಮಾಡಿ ಕೇಂದ್ರ ಸರಕಾರ ಕಾಶ್ಮೀರಕ್ಕೆ ಸ್ವಾಯತ್ತತೆ ನೀಡಿದೆ. ಮೊದಲು ಜಮ್ಮು ಕಾಶ್ಮೀರದಲ್ಲಿದ್ದ ಸ್ಥಿತಿ ಬದಲಾಗಿದೆ. ಭಯದ ವಾತಾವರಣ ಆಯೋಜಿಸಿದ್ದ ಪ್ರಕೋಷ್ಠಗಳ ಜಿಲ್ಲಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅಪ್ಪಚ್ಚು ರಂಜನ್, ಭಾರತೀಯ ಜನತಾ ಪಕ್ಷ ೨೪ ಪ್ರಕೋಷ್ಠಗಳನ್ನು ಹೊಂದಿವೆ. ಇದರಿಂದ ಎಲ್ಲಾ ವರ್ಗಕ್ಕೂ ಪಕ್ಷ ತಲುಪಿದೆ. ಪಕ್ಷ ಸಂಘಟನೆ ಮಾಡಿದ ಫಲವಾಗಿ ಇಂದು ಗಟ್ಟಿಯಾಗಿ ನೆಲೆಯೂರಿದೆ. ಸರಕಾರದ ಸಾಧನೆಯನ್ನು ಮನೆ ಹಾಗೂ ಮನಕ್ಕೆ ಮುಟ್ಟಿಸುವ ಕೆಲಸವಾಗಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಜಾಗತಿಕ ಮನ್ನಣೆ ತಂದಿದ್ದಾರೆ. ವಿಶ್ವಗುರುವಾಗಿ ಭಾರತ ಹೊರಹೊಮ್ಮಿದೆ. ಆರ್ಟಿಕಲ್ ೩೭೦ ರದ್ದು ಮಾಡಿ ಕೇಂದ್ರ ಸರಕಾರ ಕಾಶ್ಮೀರಕ್ಕೆ ಸ್ವಾಯತ್ತತೆ ನೀಡಿದೆ. ಮೊದಲು ಜಮ್ಮು ಕಾಶ್ಮೀರದಲ್ಲಿದ್ದ ಸ್ಥಿತಿ ಬದಲಾಗಿದೆ. ಭಯದ ವಾತಾವರಣ (ಮೊದಲ ಪುಟದಿಂದ) ಸರಕಾರದ ಸೌಲಭ್ಯಗಳು ಪ್ರತಿಯೊಬ್ಬರಿಗೂ ತಲುಪಬೇಕು. ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್’ ಕಲ್ಪನೆ ಈಡೇರಬೇಕು. ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ರಾಷ್ಟç. ಈ ನಿಟ್ಟಿನಲ್ಲಿ ಎಲ್ಲಾ ವರ್ಗದವರನ್ನು ಮುಟ್ಟುವ ಕೆಲಸವಾಗಬೇಕು. ಈ ಹಿನ್ನೆಲೆ ಪ್ರಕೋಷ್ಠಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಜನೋಪಯೋಗಿ ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ನೀಡಿದೆ. ಕೊಡಗು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ರೈತರಿಗೆ ದೊರಕಬೇಕಾದ ಸೌಲಭ್ಯವನ್ನು ತಲುಪಿಸಬೇಕು ಎಂದು ಕರೆ ನೀಡಿದ ಅವರು, ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಅಭಿವೃದ್ಧಿಯಲ್ಲಿ ದೇಶವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದರು. ನೆರೆ ರಾಷ್ಟçಗಳೊಂದಿಗೆ ಉತ್ತಮ ಬಾಂಧÀವ್ಯ ಬೆಸೆದರು. ಅನೇಕ ಕಾರ್ಯಕ್ರಮ ನೀಡಿ ಪ್ರಕಾಶಿಸುವ ಭಾರತ ನಿರ್ಮಿಸಿದರು. ಅಷ್ಟೆಲ್ಲ ಮಾಡಿದರೂ ಮುಂದಿನ ಚುನಾವಣೆಯಲ್ಲಿ ಸೋತರು. ಅದಕ್ಕೆ ಪಕ್ಷದ ಕಾರ್ಯಕರ್ತರ ವೈಫಲ್ಯವೇ ಕಾರಣವಾಗಿತ್ತು. ಸರಕಾರದ ಸಾಧನೆಯನ್ನು ಪಕ್ಷದ ಕಾರ್ಯಕರ್ತರು ಜನರಿಗೆ ತಿಳಿಸುವ ಕೆಲಸವಾಗಬೇಕು. ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಮುಂದಿನ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ಎದುರಿಸಲು ಸಮರ್ಥರಾಗಿರಬೇಕೆಂದು ಕಿವಿಮಾತನಾಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ, ವಿಧಾನ ಪರಿಷತ್ ಸದಸ್ಯ ಹಾಗೂ ಹಿರಿಯ ಪ್ರಬುದ್ಧ ಪ್ರಕೋಷ್ಠದ ರಾಜ್ಯ ಸಂಚಾಲಕ ಪ್ರತಾಪ್ ಸಿಂಹ ನಾಯಕ್, ಹಿರಿಯ ನಾಗರಿಕ ಪ್ರಕೋಷ್ಠದ ರಾಜ್ಯ ಸಹಸಂಚಾಲಕ ಸದಾಶಿವಯ್ಯ, ಮಾಜಿ ವಿಧಾನ ಪರಿಷತ್ತು ಸದಸ್ಯರುಗಳಾದ ಮಂಡೇಪAಡ ಸುನಿಲ್ ಸುಬ್ರಮಣಿ, ಎಸ್.ಜಿ. ಮೇದಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಮಡಿಕೇರಿ ನಗರಾಭಿವೃದ್ಧಿ ಅಧ್ಯಕ್ಷ ರಮೇಶ್ ಹೊಳ್ಳ, ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಪಂಡ ಕಾಳಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.