ಅಗ್ನಿಪಥ್ ಯೋಜನೆಯಡಿ ನೇಮಕಾತಿ ಪ್ರಕ್ರಿಯೆಗೆ ಐಎಎಫ್ ಚಾಲನೆ

ನವದೆಹಲಿ, ಜೂ. ೨೪: ಕೇಂದ್ರ ಸರ್ಕಾರ ಘೋಷಿಸಿದ ರಕ್ಷಣಾ ಪಡೆಗಳ ಹೊಸ ನೇಮಕಾತಿ ಯೋಜನೆ ವಿರುದ್ಧ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳ ಬೆನ್ನಲ್ಲೇ ಭಾರತೀಯ ವಾಯುಪಡೆ (ಐಎಎಫ್) ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ನೋಂದಣಿ ಆರಂಭಿಸುವ ಮೂಲಕ ಹೊಸ ನೇಮಕಾತಿ ಪ್ರಕ್ರಿಯೆಗೆ ಶುಕ್ರವಾರ ಚಾಲನೆ ನೀಡಿದೆ. ಅರ್ಜಿ ಸಲ್ಲಿಸಲು ನೋಂದಣಿ ವಿಂಡೋ ತೆರೆಯಲಾಗಿದ್ದು, ಇಂದು ಬೆಳಿಗ್ಗೆ ೧೦ ರಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಐಎಎಫ್ ಟ್ವಿಟ್ ಮಾಡಿದೆ. ಜೂನ್ ೧೪ ರಂದು ಅಗ್ನಿಪಥ್ ಯೋಜನೆ ಘೋಷಿಸಿದ ಕೇಂದ್ರ ಸರ್ಕಾರ ೧೭ ರಿಂದ ೨೧ ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಆಯ್ಕೆ ಮಾಡಿಕೊಳ್ಳಲಾಗುವುದು ಮತ್ತು ಅವರಲ್ಲಿ ಶೇ. ೨೫ ರಷ್ಟು ಜನರನ್ನು ನಂತರ ನಿಯಮಿತ ಸೇವೆಗೆ ಸೇರಿಸಿಕೊಳ್ಳಲಾಗುವುದು ಎಂದು ಹೇಳಿತ್ತು. ದೇಶದ ಹಲವು ಭಾಗಗಳಲ್ಲಿ ಯೋಜನೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆದವು. ಹಲವಾರು ವಿರೋಧ ಪಕ್ಷಗಳು ಮತ್ತು ಮಿಲಿಟರಿ ತಜ್ಞರು ಸಹ ಈ ಯೋಜನೆಯನ್ನು ಟೀಕಿಸಿದರು. ಇದು ಸಶಸ್ತç ಪಡೆಗಳ ಕಾರ್ಯಾಚರಣೆಯ ಸಾಮರ್ಥ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ವಾದಿಸಿದ್ದರು.

ಮುಖ್ಯಮಂತ್ರಿ ಬಂಗಲೆ ತೊರೆದಿದ್ದೇನೆ, ಪಟ್ಟು ಸಡಿಲಿಸಿಲ್ಲ: ಉದ್ಧವ್ ಠಾಕ್ರೆ

ಮುಂಬೈ, ಜೂ. ೨೪: ಮಹಾರಾಷ್ಟçದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸರ್ಕಾರ ತಮ್ಮದೇ ಪಕ್ಷದ ನಾಯಕರ ಬಂಡಾಯದಿAದ ಅಲ್ಪಮತಕ್ಕೆ ಕುಸಿದಿದೆ. ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಕೊಟ್ಟ ಶಾಕ್‌ನಿಂದ ಕಂಗಾಲಾಗಿರೋ ಉದ್ಧವ್ ಠಾಕ್ರೆ ಅವರು, ಶಿವಸೇನಾ ಬಂಡು ಕೋರರು ಪಕ್ಷವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮನ್ನು ಬಿಟ್ಟು ಹೋದವರ ಬಗ್ಗೆ ನಾನೇಕೆ ವ್ಯಥೆ ಪಡಲಿ ಎಂದು ಹೇಳಿದ್ದಾರೆ. ಇಂದು ಪಕ್ಷದ ನಾಯಕರನ್ನು ಉದ್ದೇಶಿಸಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಉದ್ಧವ್ ಠಾಕ್ರೆ, ಶಿವಸೇನೆ ತೊರೆಯುವುದಕ್ಕೂ ಮೊದಲು ಸಾಯುವುದಾಗಿ ಘೋಷಿಸಿದ ಜನರು ಈಗ ಓಡಿಹೋಗಿದ್ದಾರೆ ಎಂದು ಹೇಳಿದರು. ಕಳೆದ ಎರಡೂವರೆ ವರ್ಷಗಳಲ್ಲಿ ಕೋವಿಡ್-೧೯ ಸಾಂಕ್ರಾಮಿಕ ಮತ್ತು ಸ್ವತಃ ನಾನು ಅನಾರೋಗ್ಯದ ವಿರುದ್ಧ ಹೋರಾಡಿದೆ. ಆದರೆ ವಿರೋಧಿಗಳು ಈ ಪರಿಸ್ಥಿತಿಯ ಲಾಭವನ್ನು ಪಡೆದರು ಎಂದು ಮಹಾ ಸಿಎಂ ಹೇಳಿದ್ದಾರೆ.

ಬಿಡಿಎ, ಬಿಡಬ್ಲ್ಯೂಎಸ್ ಎಸ್ ಬಿ, ಬಿಬಿಎಂಪಿಗೆ ಹೈಕೋರ್ಟ್ ತಪರಾಕಿ

ಬೆಂಗಳೂರು, ಜೂ. ೨೪: ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ಪ್ರಧಾನಿ ಮತ್ತು ರಾಷ್ಟ್ರಪತಿ ಆಗಾಗ್ಗೆ ಇಲ್ಲಿಗೆ ಭೇಟಿ ನೀಡುತ್ತಿರಬೇಕು ಎಂದು ಹೈಕೋರ್ಟ್ ತಪರಾಕಿ ಹಾಕಿದೆ. ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿನ ಕೆಲ ನಿವೇಶನಗಳಿಗೆ ಒಳಚರಂಡಿ, ಕುಡಿಯುವ ನೀರಿನ ಸಂಪರ್ಕ ಮತ್ತು ರಸ್ತೆ ಸೌಲಭ್ಯ ಕಲ್ಪಿಸಿಲ್ಲ ಎಂದು ಆಕ್ಷೇಪಿಸಿ ಪಿ.ಮಂಜುಳಾ ಮತ್ತು ಶಾರದಮ್ಮ ಎಂಬುವವರು ಬಿಡಿಎ ಅಧಿಕಾರಿಗಳ ವಿರುದ್ಧ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಮೊನ್ನೆಯಷ್ಟೇ ಪ್ರಧಾನಿ ಬಂದು ಹೋಗಿದ್ದಾರೆ. ಅದಕ್ಕಾಗಿ ರೂ. ೨೩ ಕೋಟಿ ಖರ್ಚು ಮಾಡಿ ನಗರದ ಗುಂಡಿಗಳನ್ನು ಮುಚ್ಚಲಾಗಿದೆ. ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ಅಧಿಕಾರಿಗಳು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬಹುದು‘ ಎಂದು ನ್ಯಾಯಪೀಠ ಬಿಡಿಎ ಕಾರ್ಯವೈಖರಿಯನ್ನು ಕುಟುಕಿತು. ಅಕ್ಟೋಬರ್ ೨೧, ೨೦೨೦ ರಂದು, ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠವು ಎರಡು ತಿಂಗಳೊಳಗೆ ವಿಶ್ವೇಶ್ವರಯ್ಯ ಬಡಾವಣೆಯಲ್ಲಿನ ಎರಡು ಸೈಟ್‌ಗಳಿಗೆ ಕುಡಿಯುವ ನೀರು ಮತ್ತು ರಸ್ತೆ ಸಂಪರ್ಕವನ್ನು ಕಲ್ಪಿಸುವಂತೆ ನಾಗರಿಕ ಸಂಸ್ಥೆಗಳಿಗೆ ಆದೇಶಿಸಿ ಪ್ರಕರಣವನ್ನು ವಿಲೇವಾರಿ ಮಾಡಿತ್ತು. ಹಿಂದಿನ ಹೈಕೋರ್ಟ್ ಆದೇಶವನ್ನು ಪಾಲಿಸದ ಕಾರಣ ಇಬ್ಬರು ಮಹಿಳೆಯರು ಒಂದು ವರ್ಷದ ನಂತರ ಬಿಡಿಎ ಆಯುಕ್ತರು ಮತ್ತು ಬಿಡಬ್ಲ್ಯೂಎಸ್ ಎಸ್‌ಬಿ ಸಂಬAಧಪಟ್ಟ ಇಂಜಿನಿಯರ್‌ಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯೊಂದಿಗೆ ಹೈಕೋರ್ಟ್ ಸಂಪರ್ಕಿಸಿದ್ದರು. ನಾಗರಿಕ ಸಂಸ್ಥೆಗಳು ತಮ್ಮ ಕಾರ್ಯವನ್ನು ಸರಿಯಾಗಿ ನಿಭಾಯಿಸಲು ಪ್ರಧಾನಿ ಮತ್ತು ರಾಷ್ಟçಪತಿಗಳು ಆಗಾಗ್ಗೆ ಬೆಂಗಳೂರಿಗೆ ಭೇಟಿ ನೀಡಿದರೆ ಬಹುಶಃ ರಸ್ತೆಗಳ ಸ್ಥಿತಿ ಸುಧಾರಿಸುತ್ತದೆ. ಕಳೆದ ವಾರ ನೀವು ಗುಂಡಿಗಳನ್ನು ತುಂಬಲು ೨೩ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದೀರಿ. ನಿಮ್ಮ ಕೆಲಸವನ್ನು ಮಾಡಲು ಪ್ರಧಾನಿ ಪ್ರತಿ ಬಾರಿ ಬೇರೆ ಬೇರೆ ರಸ್ತೆಗಳಲ್ಲಿ ಪ್ರಯಾಣಿಸಬೇಕು ಎಂದು ಹೈಕೋರ್ಟ್ ಕಿಡಿಕಾರಿದೆ.

ಅಸ್ಸಾಂ ತೊರೆಯಲು ಶಿಂಧೆಗೆ ಕಾಂಗ್ರೆಸ್ ಪತ್ರ

ಗುವಾಹಟಿ, ಜೂ. ೨೪: ಮಹಾರಾಷ್ಟçದ ಬಂಡಾಯ ಶಿವಸೇನೆ ಶಾಸಕರು ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಯಲ್ಲಿ ಬೀಡು ಬಿಟ್ಟಿದ್ದು, ನಿಮ್ಮಿಂದಾಗಿ ಪ್ರವಾಹದಿಂದ ತತ್ತರಿಸಿರುವ ಅಸ್ಸಾಂನ ಮಾನ ಮರ್ಯಾದೆ ಹೋಗುತ್ತಿದೆ. ಮೊದಲು ನೀವು ರಾಜ್ಯ ತೊರೆಯಿರಿ ಎಂದು ಕಾಂಗ್ರೆಸ್ ಘಟಕದ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಅವರು ಶುಕ್ರವಾರ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಅಸ್ಸಾಂನಲ್ಲಿ ಪ್ರವಾಹದ ಪರಿಸ್ಥಿತಿಯಲ್ಲೂ ಶಾಸಕರಿಗೆ ರಾಜ ಆತಿಥ್ಯ ಸಿಗುತ್ತಿದೆ. ಅಸ್ಸಾಂನಲ್ಲಿ ನಿಮ್ಮ ಉಪಸ್ಥಿತಿಯು ಅನಾರೋಗ್ಯಕರ ವಾತಾವರಣವನ್ನು ಸೃಷ್ಟಿಸುತ್ತಿದೆ ಎಂದು ಏಕನಾಥ್ ಶಿಂಧೆ ಅವರಿಗೆ ಬರೆದ ಪತ್ರದಲ್ಲಿ ಬೋರಾ ಹೇಳಿದ್ದಾರೆ. ಮಹಾರಾಷ್ಟçದ ಆಡಳಿತಾರೂಢ ಶಿವಸೇನೆಯ ಶಾಸಕರೊಂದಿಗೆ ಗುವಾಹಟಿಯಲ್ಲಿನ ಹೊಟೇಲ್‌ನಲ್ಲಿ ನಿಮ್ಮ ಉಪಸ್ಥಿತಿ ಮಹಾರಾಷ್ಟçದ ಚುನಾಯಿತ ಸರ್ಕಾರವನ್ನು ಉರುಳಿಸಲು ಕುದುರೆ ವ್ಯಾಪಾರದಲ್ಲಿ ತೊಡಗಿದೆ. ನೀವು ತಂಗಿರುವ ಹೊಟೇಲ್ ಮತ್ತು ನಿಮ್ಮ ಬಗೆಗಿನ ಮಾಧ್ಯಮ ಪ್ರಸಾರವು ಅಸ್ಸಾಮಿ ಜನರ ನೋವನ್ನು ತೋರಿಸಲು ಅಡ್ಡಿಯಾಗಿದೆ. ಅಸ್ಸಾಂ ವಿನಾಶಕಾರಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

೨೦೦೨ರ ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ಮೋದಿಗೆ ಸುಪ್ರೀಂ ಕೋರ್ಟ್ ಕ್ಲೀನ್‌ಚಿಟ್

ನವದೆಹಲಿ, ಜೂ. ೨೪: ೨೦೦೨ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್‌ಚಿಟ್ ಸಿಕ್ಕಿದೆ. ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ. ಪ್ರಕರಣದಲ್ಲಿ ಪಿಎಂ ಮೋದಿ ಸೇರಿದಂತೆ ಹಲವರಿಗೆ ವಿಶೇಷ ತನಿಖಾ ತಂಡ ಈ ಹಿಂದೆ ಕ್ಲೀನ್ ಚಿಟ್ ನೀಡಿತ್ತು. ಅದನ್ನು ಪ್ರಶ್ನಿಸಿ ಜಾಕಿಯಾ ಜಾಫ್ರಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಅಲ್ಲಿ ಕೂಡ ಅಪಜಯವಾಗಿದೆ. ೨೦೦೨ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಗಲಭೆಯಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರ ೬೩ ಮಂದಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೀಡಿದ ಕ್ಲೀನ್‌ಚಿಟ್ ಅನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಹತ್ಯೆಯಾದ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರ ಮನವಿಯನ್ನು ವಜಾಗೊಳಿಸಿದೆ. ನ್ಯಾಯಮೂರ್ತಿ ಎ.ಎಂ. ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠವು ೨೦೧೨ ರಲ್ಲಿ ಎಸ್‌ಐಟಿ ಸಲ್ಲಿಸಿದ ಮುಕ್ತಾಯ ವರದಿಯ ವಿರುದ್ಧ ಜಾಕಿಯಾ ಜಾಫ್ರಿ ಅವರ ಪ್ರತಿಭಟನಾ ಅರ್ಜಿಯನ್ನು ತಿರಸ್ಕರಿಸಿದ ಮ್ಯಾಜಿಸ್ಟೆçÃಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿಗಳಾದ ದಿನೇಶ್ ಮಾಹೇಶ್ವರಿ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠ, ಜಾಕಿಯಾ ಜಾಫ್ರಿ ಮನವಿಯು ಅರ್ಹತೆ ಹೊಂದಿಲ್ಲ ಎಂದು ಹೇಳಿದೆ. ೨೦೦೨ರ ಗುಜರಾತ್ ಗಲಭೆಯಲ್ಲಿ ದೊಡ್ಡ ಪಿತೂರಿ ನಡೆದಿದೆ ಎಂದು ಜಾಕಿಯಾ ಆರೋಪಿಸಿದ್ದರು. ಫೆಬ್ರವರಿ ೨೮, ೨೦೦೨ ರಂದು ಗೋಧ್ರಾ ರೈಲು ದಹನದ ಒಂದು ದಿನದ ನಂತರ ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಹಿಂಸಾಚಾರದ ಸಂದರ್ಭದಲ್ಲಿ ಕೊಲ್ಲಲ್ಪಟ್ಟ ೬೮ ಜನರಲ್ಲಿ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಎಹ್ಸಾನ್ ಜಾಫ್ರಿ ಕೂಡ ಒಬ್ಬರು. ೨೦೦೨ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಮೋದಿ ಸೇರಿದಂತೆ ೬೪ ಮಂದಿಗೆ ಎಸ್‌ಐಟಿ ಕ್ಲೀನ್‌ಚಿಟ್ ನೀಡಿದ್ದರ ವಿರುದ್ಧ ಜಾಕಿಯಾ ಜಾಫ್ರಿ ಸವಾಲು ಹಾಕಿದ್ದರು. ಕಳೆದ ವರ್ಷ ಡಿಸೆಂಬರ್ ೯ ರಂದು ಸುಪ್ರೀಂ ಕೋರ್ಟ್ ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು.