ಮಡಿಕೇರಿ: ಅಂರ್ರಾಷ್ಟಿçÃಯ ಯೋಗ ದಿನದ ಪ್ರಯುಕ್ತ ಯೋಗ ಫೌಂಡೇಷನ್ ವತಿಯಿಂದ ಅಮ್ಮತ್ತಿ ಕೊಡವ ಸಮಾಜದಲ್ಲಿ ಕುಟ್ಟಂಡ ಪ್ರಿನ್ಸ್ ಗಣಪತಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಚಂಡ ಅರುಣ್ ಮತ್ತು ಬೊಮ್ಮಂಡ ಬೀನಾ ಅವರು ಯೋಗ ನಡೆಸಿಕೊಟ್ಟರು.
ಕುಟ್ಟಂಡ ನೀತಾ ಪೂಣಚ್ಚ ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಆರ್ಟ್ ಆಫ್ ಲಿವಿಂಗ್ನ ಯೋಗ ಗುರು ಪೋಡಮಾಡ ಭವಾನಿ ನಾಣಯ್ಯ ಅವರು ಮಾತನಾಡಿ, ಯೋಗ ದೈಹಿಕವಾಗಿಯೂ, ಆಧ್ಯಾತ್ಮಿಕವಾಗಿಯೂ ಮತ್ತು ಮಾನಸಿಕವಾಗಿಯೂ ನಮ್ಮನ್ನು ಸದೃಢರನ್ನಾಗಿ ಮಾಡುತ್ತದೆ. ಶರೀರ ಮತ್ತು ಮನಸ್ಸಿನ ನಡುವೆ ಸಾಮರಸ್ಯವನ್ನು ತರುತ್ತದೆ ಎಂದು ನುಡಿದರು. ಹಾಗೆಯೇ ಯೋಗ ಪ್ರಾಣಾಯಾಮ ಮತ್ತು ಧ್ಯಾನದ ಮಹತ್ವದ ಬಗ್ಗೆ ಉಪನ್ಯಾಸ ನೀಡಿ, ಕಾರ್ಯಕ್ರಮದ ಕೊನೆಯಲ್ಲಿ ಧ್ಯಾನ ಮಾಡಿಸಿ ಹಾಡಿ ಸಾರ್ವಜನಿಕರ ಮನಸೆಳೆದರು.
ಸರ್ವೋದಯ ವಿದ್ಯಾಲಯ ವೀರಾಜಪೇಟೆ: ವೀರಾಜಪೇಟೆಯ ಸರ್ವೋದಯ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಯೋಗ ದಿನವನ್ನು ಆಚರಿಸಲಾಯಿತು.
ಈ ಸಂದರ್ಭ ಜಿ.ಪಂ. ಮಾಜಿ ಸದಸ್ಯೆ ಕಾಂತಿ ಸತೀಶ್ ಮಾತನಾಡಿ, ಯೋಗವನ್ನು ವರ್ಷದಲ್ಲಿ ಒಮ್ಮೆ ಮಾತ್ರವಲ್ಲದೆ ಪ್ರತಿದಿನ ನಮ್ಮ ಜೀವನದ ಕ್ರಮವಾಗಿ ರೂಢಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ವಿದ್ಯಾಲಯದ ಪ್ರಾಂಶುಪಾಲೆ ಡಾ. ವಾಣಿ, ಯೋಗದ ಉದ್ದೇಶಗಳನ್ನು ವಿವರಿಸಿದರು.
ಸಭಾ ಕಾರ್ಯಕ್ರಮಕ್ಕೂ ಮುನ್ನ ದ್ವಿತೀಯ ಬಿ.ಇಡ್. ಪ್ರಶಿಕ್ಷಣಾರ್ಥಿಗಳಿಂದ ಯೋಗ ಪ್ರದರ್ಶನ ನೆರವೇರಿತು.
ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಪದ್ಮಲತಾ, ಗ್ರಂಥಪಾಲಕರು ಹಾಗೂ ಯೋಗ ತರಬೇತುದಾರ ರಾಜಶೇಖರ್, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು. ಪ್ರಶಿಕ್ಷಣಾರ್ಥಿ ಶ್ರೀರಕ್ಷ ಪ್ರಾರ್ಥಿಸಿದರು, ಟಿ.ಎಸ್. ಕರಿಶ್ಮ ನಿರೂಪಿಸಿದರು, ಸಾಹಿರ ಸ್ವಾಗತಿಸಿದರು. ಸಿ.ಕೆ. ಪೂಜಾ ವಂದಿಸಿದರು.
ಪತAಜಲಿ ಯೋಗ ಸಮಿತಿ ಶನಿವಾರಸಂತೆ: ಇಲ್ಲಿನ ಪತಂಜಲಿ ಯೋಗ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಯೋಗ ಗುರು ಎ.ಡಿ. ಮೋಹನ್ ಕುಮಾರ್ ನೇತೃತ್ವದಲ್ಲಿ ಶಿಬಿರಾರ್ಥಿಗಳು ವಿವಿಧ ಆಸನಗಳನ್ನು ಪ್ರದರ್ಶಿಸಿದರು.
ಗೋಣಿಕೊಪ್ಪ ಕಾಪ್ಸ್ ಶಾಲೆ ಮಡಿಕೇರಿ: ಇಂದಿನ ಒತ್ತಡದ ಜೀವನದಿಂದ ಹೊರಬರಲು ಯೋಗ ಅವಶ್ಯಕ. ಮನುಷ್ಯ ಆರೋಗ್ಯವಂತನಾಗಿರಲು ಯೋಗ ಸಹಕಾರಿ ಎಂದು ಗೋಣಿಕೊಪ್ಪ ಕಾಪ್ಸ್ ಶಾಲೆಯ ಪ್ರಾಂಶುಪಾಲ ಡಾ. ಬೆನ್ನಿ ಕುರಿಯೋಸ್ ಹೇಳಿದರು.
ಶಾಲಾ ಆವರಣದಲ್ಲಿ ಆಯೋಜಿಸಿದ್ದ ಯೋಗ ದಿನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇವಲ ಶರೀರ ಆರೋಗ್ಯವಂತವಾಗಿದ್ದರೆ ಸಾಲದು. ಮನಸ್ಸೂ ಸಹ ಶಾಂತತೆಯಿAದ ಕೂಡಿರಬೇಕು. ವಿದ್ಯಾರ್ಥಿಗಳು ಬಾಲ್ಯದಿಂದಲೇ ಧ್ಯಾನ, ಪ್ರಾಣಾಯಾಮ ಮತ್ತು ಆಸನಗಳನ್ನು ಮಾಡುವುದರಿಂದ ಜ್ಞಾಪಕಶಕ್ತಿಯು ವೃದ್ಧಿಯಾಗಿ ಮನಸ್ಸಿನ ಚಂಚಲತೆ ನಿವಾರಣೆಯಾಗಿ, ಶರೀರವೂ ದೃಢವಾಗುವುದು ಎಂದು ಹೇಳಿದರು.
ಶಾಲಾ ಮಕ್ಕಳು ಮತ್ತು ಶಿಕ್ಷಕರು ಆಸನಗಳನ್ನು ಮತ್ತು ಧ್ಯಾನ, ಪ್ರಾಣಾಯಾಮಗಳನ್ನು ಮಾಡುವುದರೊಂದಿಗೆ ಯೋಗ ದಿನಾಚರಣೆಯನ್ನು ಆಚರಿಸಿದರು.
ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆ
ಶನಿವಾರಸAತೆ: ಶನಿವಾರಸಂತೆಯ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ಪಿ.ಯು. ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಯೋಗ ಗುರು ಮೋಹನ್ ಕುಮಾರ್ ನೇತೃತ್ವದಲ್ಲಿ ವಿವಿಧ ಆಸನಗಳನ್ನು ಪ್ರದರ್ಶಿಸಿದರು.
ಫಾದರ್ ಸೆಬಾಸ್ಟಿನ್ ಮೈಕಲ್, ಶಿಕ್ಷಕರು ಪಾಲ್ಗೊಂಡಿದ್ದರು.