ಮಡಿಕೇರಿ, ಜೂ. ೨೫: ತಾ. ೨೭ರಿಂದ ಜುಲೈ ೪ರವರೆಗೆ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗಳು ನಡೆಯಲಿವೆ. ಕೊಡಗು ಜಿಲ್ಲೆಯ ೦೪ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಹಾಗೂ ಪಾವಿತ್ರö್ಯತೆ ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳು ಸೇರಿದಂತೆ ೨೦೦ ಮೀ., ಸುತ್ತಳತೆಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲು ಹಾಗೂ ಈ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು -ಮಡಿಕೇರಿ, ಸೆಂಟ್ ಜೋಸೆಫ್ ಪ್ರೌಢಶಾಲೆ- ಸೋಮವಾರಪೇಟೆ, ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) - ವೀರಾಜಪೇಟೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯಲಿವೆ.