ಸಿದ್ದಾಪುರ, ಜೂ ೨೪: ಅರಣ್ಯ ಇಲಾಖಾಧಿಕಾರಿಗಳು ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಕಾಡಾನೆಗಳು ಓಡುತ್ತಿದ್ದ ದೃಶ್ಯ ಚೆನ್ನಂಗಿ ಅಬ್ಬೂರುಕಟ್ಟೆ ಗ್ರಾಮದಲ್ಲಿ ಕಂಡು ಬಂದಿದೆ.

ತಿತಿಮತಿ ವಲಯದ ಅರಣ್ಯ ಪ್ರದೇಶದ ವ್ಯಾಪ್ತಿಗೆ ಒಳಪಡುವ ಅಬ್ಬೂರು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಫಿ ತೋಟದ ಒಳಗೆ ಬೀಡುಬಿಟ್ಟು ದಾಂಧಲೆ ನಡೆಸುತ್ತಾ ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿತ್ತು. ಅಲ್ಲದೆ ಮಾನವನ ಮೇಲೆ ಕೂಡ ಧಾಳಿ ನಡೆಸಲು ಮುಂದಾಗುತ್ತಿತ್ತು. ಈ ಸಿದ್ದಾಪುರ, ಜೂ ೨೪: ಅರಣ್ಯ ಇಲಾಖಾಧಿಕಾರಿಗಳು ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಕಾಡಾನೆಗಳು ಓಡುತ್ತಿದ್ದ ದೃಶ್ಯ ಚೆನ್ನಂಗಿ ಅಬ್ಬೂರುಕಟ್ಟೆ ಗ್ರಾಮದಲ್ಲಿ ಕಂಡು ಬಂದಿದೆ.

ತಿತಿಮತಿ ವಲಯದ ಅರಣ್ಯ ಪ್ರದೇಶದ ವ್ಯಾಪ್ತಿಗೆ ಒಳಪಡುವ ಅಬ್ಬೂರು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಫಿ ತೋಟದ ಒಳಗೆ ಬೀಡುಬಿಟ್ಟು ದಾಂಧಲೆ ನಡೆಸುತ್ತಾ ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿತ್ತು. ಅಲ್ಲದೆ ಮಾನವನ ಮೇಲೆ ಕೂಡ ಧಾಳಿ ನಡೆಸಲು ಮುಂದಾಗುತ್ತಿತ್ತು. ಈ ಮತ್ತೊಂದು ಸಲಗಗಳು ಸೇರಿದಂತೆ ೧೦ಕ್ಕೂ ಅಧಿಕ ಕಾಡಾನೆಗಳು ಅರಣ್ಯದತ್ತ ಓಡಿದವು. ಈ ಭಾಗದಲ್ಲಿ ಕಾಫಿ ತೋಟಗಳಲ್ಲಿ ಮರಿಯಾನೆಗಳೊಂದಿಗೆ ಕಾಡಾನೆಗಳು ಬೀಡುಬಿಟ್ಟಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಶಾಶ್ವತ ಯೋಜನೆಯನ್ನು ರೂಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.