ಕೂಡಿಗೆ, ಜೂ. ೨೪: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಗೆ ತೆರಳುವ ಮತ್ತು ಆ ವ್ಯಾಪ್ತಿಯ ೭ ಗ್ರಾಮಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಈಗಾಗಲೇ ಕುಶಾಲನಗರ ಹಾರಂಗಿ ರಸ್ತೆಯ ಅಗಲೀಕರಣ ಮತ್ತು ಕಾಂಕ್ರಿಟ್ ರಸ್ತೆಯ ನಿರ್ಮಾಣಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಸೂಚನೆಯಂತೆ ಹಾರಂಗಿಯ ನೀರಾವರಿ ಇಲಾಖೆಯ ಮೂಲಕ ಸರಕಾರಕ್ಕೆ ರೂ. ೧೦ ಕೋಟಿ ವೆಚ್ಚದ ಕಾಮಗಾರಿ ಕೈಗೊಳ್ಳಲು ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಹಾರಂಗಿ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.