ಮಡಿಕೇರಿ, ಜೂ. ೨೫: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ದಿಂದ ೨೦೨೨-೨೩ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಗಳಲ್ಲಿ ಸುವಿಧಾ ತಂತ್ರಾAಶದ ಮುಖಾಂತರ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವಾಗ ಅರ್ಜಿ ದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ ವಿಳಾಸ/ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು. (ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿ ಗಳು). ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ, ಸಂಬAಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಲ್ಲಿ ಕಚೇರಿ ಅವಧಿಯಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಇರುತ್ತದೆ.
ಈ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಅರ್ಜಿದಾರರು hಣಣಠಿs://ಞಚಿಚಿಜ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯ ಬಹುದಾಗಿದೆ. ಹೆಚ್ಚಿನ ಮಾಹಿತಿ ಪಡೆಯಲು ನಿಗಮದ ಸಹಾಯ ವಾಣಿ ಸಂಖ್ಯೆ ೦೮೦-೨೨೩೭೪೮೩೨ ಮತ್ತು ೯೬೦೬೦೬೬೩೮೯ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೧೬೫೬ ಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿ ಗಳನ್ನು ಅಗತ್ಯ ದಾಖಲಾತಿ ಗಳೊಂದಿಗೆ ಆಗಸ್ಟ್ ೩ ರೊಳಗೆ ಸುವಿಧಾ ತಂತ್ರಾAಶದ ಮುಖಾಂತರ ಸಲ್ಲಿಸಬೇಕು ಎಂದು ಕರ್ನಾಟಕ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.