ಮಡಿಕೇರಿ, ಜೂ. ೨೬: ಮೈಕ್ರೋ ಕ್ರೆಡಿಟ್ ಯೋಜನೆಯಡಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ಒದಗಿಸಲು ಅರ್ಹ ಪರಿಶಿಷ್ಟ ಪಂಗಡದ ಮಹಿಳಾ ಸ್ವ-ಸಹಾಯ ಸಂಘದ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆಯರು ರಚಿಸಿಕೊಂಡಿರುವ ಮಹಿಳಾ ಸ್ವ-ಸಹಾಯ ಸಂಘದ ಕನಿಷ್ಠ ೧೦ ಮತ್ತು ೨೦ ಮಹಿಳಾ ಸದಸ್ಯರನ್ನು ಹೊಂದಿರುವ ಸಂಘಕ್ಕೆ ಗುಂಪು ಚಟುವಟಿಕೆಗಾಗಿ ಪ್ರತಿ ಸದಸ್ಯರಿಗೆ ಸಹಾಯಧನ ರೂ.೧೫ ಸಾವಿರ ಮತ್ತು ಬೀಜಧನ ರೂ.೧೦ ಸಾವಿರಗಳು ಆಗಿದೆ. ಹೀಗೆ ಪ್ರತಿ ಸದಸ್ಯರಿಗೆ ರೂ.೨೫ ಸಾವಿರಗಳಂತೆ ಸದಸ್ಯತ್ವ ಹೊಂದಿರುವ ಸ್ವ-ಸಹಾಯ ಸಂಘಕ್ಕೆ ಆರ್ಥಿಕ ನೆರವು ಒದಗಿಸಲಾಗುವುದು. ಆಸಕ್ತ ಮಹಿಳಾ ಸ್ವ-ಸಹಾಯ ಸಂಘದವರು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ೧೫ ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ೧೮ ವರ್ಷದಿಂದ ೬೦ ವರ್ಷದೊಳಗಿನ ವಯೋಮಾನದವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶವಾದಲ್ಲಿ ರೂ.೧.೫೦ ಲಕ್ಷ ಹಾಗೂ ನಗರ ಪ್ರದೇಶವಾದಲ್ಲಿ ರೂ.೨ ಲಕ್ಷ ಮಿತಿಯೊಳಗಿರಬೇಕು. ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು. ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ರಾಷ್ಟಿçÃಕೃತ, ಷೆಡ್ಯೂಲ್ಡ್, ಗ್ರಾಮೀಣ ಬ್ಯಾಂಕಿನಲ್ಲಿ ಸಂಘದ ಸದಸ್ಯರುಗಳು ಉಳಿತಾಯ ಖಾತೆಯನ್ನು ಹೊಂದಿರಬೇಕು. ಅರ್ಜಿದಾರರು ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಾಗಿರಬೇಕು ಅಥವಾ ಹೊಸದಾಗಿ ಸದಸ್ಯತ್ವವನ್ನು ಪಡೆಯಬೇಕು. ಸ್ವ-ಸಹಾಯ ಸಂಘವು ನೋಂದಣಿಯಾಗಿರಬೇಕು. ಅರ್ಜಿದಾರರು ಸ್ವ-ಸಹಾಯ ಸಂಘದ ಭಾಗವಾಗಿ ಇರುವ ಬಗ್ಗೆ ಮತ್ತು ಗುಂಪು ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಾಪಾರ ವಹಿವಾಟನ್ನು ನಿರ್ವಹಿಸಿ ಆದಾಯವನ್ನು ಮಾತ್ರ ಪಡೆಯುವ ಬಗ್ಗೆ ಲಿಖಿತ ಒಪ್ಪಿಗೆ ನೀಡಬೇಕು. ನಿಗಮ ನೀಡುವ ಬೀಜಧನ ಸಾಲ ಮತ್ತು ಸಹಾಯಧನ ಮೂಲ ಬಂಡವಾಳವನ್ನಾಗಿ ಬಳಸಬೇಕು. ಮಂಜೂರಾತಿ ಪಡೆದ ಫಲಾನುಭವಿಯು ಅನರ್ಹರೆಂದು ಕಂಡುಬAದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದು ಪಡಿಸಲಾಗುತ್ತದೆ. ಸೌಲಭ್ಯ ಪಡೆಯಲು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ/ ಗುರುತಿನ ಚೀಟಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ಸಂಘದ ನೋಂದಣಿ ಪ್ರತಿ, ಸಂಘದ ಬ್ಯಾಂಕ್ ಪಾಸ್ ಪುಸ್ತಕ, ಸಂಘದ ಹಾಜರಾತಿ ವಹಿ ಮತ್ತು ಸಭೆಯ ನಡವಳಿ ಹಾಗೂ ಸಂಘದ ಸದಸ್ಯರ ಗ್ರೂಫ್ ಪೋಟೋ ದಾಖಲಾತಿಗಳನ್ನು ಸಲ್ಲಿಸಬೇಕು. ಫಲಾಪೇಕ್ಷಿಗಳು ಅರ್ಜಿ ಮತ್ತು ದಾಖಲಾತಿಗಳನ್ನು ಜುಲೈ ೧೫ ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಮಡಿಕೇರಿ, ಕೊಡಗು ಜಿಲ್ಲೆ-೫೭೧೨೦೧ ದೂ.ಸಂ.೦೮೨೭೨-೨೨೮೮೫೭ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎನ್.ಬಿ. ಚಂದ್ರಶೇಖರ್ ತಿಳಿಸಿದ್ದಾರೆ.