ವೀರಾಜಪೇಟೆ, ಜೂ. ೨೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅನುಷ್ಠಾನ ಪ್ರತೀ ಮಹಿಳೆಯ ಮನದಲ್ಲೂ ಹೊಸ ಭರವಸೆಯ ಬೆಳಕನ್ನು ಮೂಡಿಸುವಲ್ಲಿ ಯಶಸ್ವಿಯಾಗಿದೆ ಎಂದು ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ-ಮಡಿಕೇರಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಮ್ಮತ್ತಿ ವಲಯದ ಚೆಂಬೆಬೆಳ್ಳೂರು ಗ್ರಾಮದಲ್ಲಿ ಆರಾಧನಾ ನೂತನ ಜ್ಞಾನವಿಕಾಸ ಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ದೇವಣಗೇರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಬಿ.ಸಿ. ಲೋಕೇಶ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಳ್ಳುವ ಪ್ರತಿಯೊಂದು ಕಾರ್ಯಕ್ರಮವೂ ಸಮಾಜಮುಖಿಯಾಗಿ ಮೂಡಿಬರುತ್ತಿದೆ ಎಂದರು.

ತಾಲೂಕಿನ ಯೋಜನಾಧಿಕಾರಿ ದಿನೇಶ್ ಬಿ. ನೂತನ ಕೇಂದ್ರ ಸದಸ್ಯರಿಗೆ ಶುಭ ಹಾರೈಸಿದರು. ಮಹಿಳಾ ಮಂಡಳಿ ಅಧ್ಯಕ್ಷೆ ಲಿಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಲಯದ ಮೇಲ್ವಿಚಾರಕರು ಜ್ಞಾನ ವಿಕಾಸ ಸಮನ್ವಯಾಧಿಕಾರಿ, ಸೇವಾಪ್ರತಿನಿಧಿಗಳು ಕೇಂದ್ರದ ಸದಸ್ಯರು, ಸಂಘಗಳ ಸದಸ್ಯರು ಉಪಸ್ಥಿತರಿದ್ದರು.