ನಾಪೋಕ್ಲು, ಜೂ. ೨೬: ಸಮೀಪದ ಎಮ್ಮೆಮಾಡು ಗ್ರಾಮದ ನಿವಾಸಿ ಉಮ್ಮುಕುಲ್ಸು ಎಂಬವರ ಮನೆಯ ಒಂದು ಭಾಗ ಮಳೆಯಿಂದ ಕುಸಿದು ಬಿದ್ದು ನಷ್ಟ ಸಂಭವಿಸಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮಲೆಕ್ಕಿಗ ಹರೀಶ್‌ಕುಮಾರ್ ಹಾಗೂ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ರೂ. ೫೦೦೦೦ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.