ನಾಪೋಕ್ಲು, ಜೂ. ೨೬: ಮಳೆಗಾಲದಲ್ಲಿ ಪಡಿತರ ಚೀಟಿಯವರಿಗೆ ಸೀಮೆಎಣ್ಣೆ ವಿತರಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕ್ರಮಕೈಗೊಳ್ಳಬೇಕೆಂದು ನಾಪೋಕ್ಲು ಕಾಂಗ್ರೆಸ್ ವಲಯಾಧ್ಯಕ್ಷ ಮಾಚೆಟ್ಟಿರ ಕುಶು ಕುಶಾಲಪ್ಪ ಆಗ್ರಹಿಸಿದ್ದಾರೆ.
ಈ ಬಗ್ಗೆ ‘ಶಕ್ತಿ’ಗೆ ಹೇಳಿಕೆ ನೀಡಿದ ಅವರು ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲ ಆರಂಭಗೊAಡಿದೆ. ನಾಪೋಕ್ಲು ವ್ಯಾಪ್ತಿಯ ಹೆಚ್ಚಿನ ಗ್ರಾಮಗಳು ಬೆಟ್ಟಗುಡ್ಡಗಳಿಂದ ಆವೃತಗೊಂಡಿದೆ. ಈ ವ್ಯಾಪ್ತಿಯಲ್ಲಿ ಮಳೆಯ ತೀವ್ರತೆಯೂ ಹೆಚ್ಚಿರುತ್ತದೆ. ಮಳೆಗಾಲದಲ್ಲಿ ಹಲವು ಗ್ರಾಮಗಳು ಪ್ರವಾಹದಿಂದಾಗಿ ಇತರೆಡೆಗಳಿಂದ ಸಂಪರ್ಕ ಕಳೆದುಕೊಳ್ಳುತ್ತದೆ. ಮಳೆ ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳು ಉರುಳಿ ಹಲವಾರು ದಿನಗಳು ವಿದ್ಯುತ್ ಇಲ್ಲದೆ ಕತ್ತಲೆಯಲ್ಲಿ ದಿನಕಳೆಯುವಂತಹ ಪರಿಸ್ಥಿತಿಯಾಗುತ್ತದೆ. ಇದರಿಂದ ಮಳೆಗಾಲ ಮುಗಿಯುವವರೆಗಾದರೂ ಈ ವ್ಯಾಪ್ತಿಯ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಿಸಲು ಇಲಾಖೆಯವರು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.