ಕೂಡಿಗೆ, ಜೂ. ೨೬: ಸರಕಾರದ ವಿವಿಧ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ರೈತರು ಮಿಶ್ರ ಬೆಳೆಯನ್ನು ಬೆಳೆಯುವುದರ ಮೂಲಕ ಆರ್ಥಿಕವಾಗಿ ಮುಂದುವರೆಯಲು ಸಾಧ್ಯವಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ೭ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತರಕಾರಿಯ ಕಿರು ಚೀಲಗಳನ್ನು ಮತ್ತು ತೋಟಗಾರಿಕಾ ಗಿಡಗಳನ್ನು ರೈತರಿಗೆ ವಿತರಣೆ ಮಾಡಿ ಮಾತನಾಡಿದರು. ನಂತರ ಶಾಸಕರು ಕೃಷಿ ಇಲಾಖೆ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯ ಅಡಿಯಲ್ಲಿ ನಿರ್ಮಾಣ ದ ಜಲ ಸಂರಕ್ಷಣೆಯ ಮಿನಿ ಡ್ಯಾಂ ಕಾಮಗಾರಿಯನ್ನು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಸೇರಿದಂತೆ ಸದಸ್ಯರು ಹಾಗೂ ಸೋಮವಾರಪೇಟೆ ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಯಾದವ್ ಬಾಬು ಹಿರಿಯ ತೋಟಗಾರಿಕಾ ನಿರ್ದೇಶಕರು ಹಾಗೂ ಜಲಾನಯನ ಅಧಿಕಾರಿ ದಿನೇಶ್, ಸಹಾಯಕ ಅಧಿಕಾರಿ ಹರೀಶ್ ಸೇರಿದಂತೆ ರೈತರು ಹಾಜರಿದ್ದರು.