ಸೋಮವಾರಪೇಟೆ,ಜೂ.೨೬: ವಿದ್ಯುತ್ ತಂತಿ ಸ್ಪರ್ಶಗೊಂಡು ಜಾನುವಾರು ಸಾವನ್ನಪ್ಪಿರುವ ಘಟನೆ ಸಮೀಪದ ಕೆಂಚಮ್ಮನಬಾಣೆ-ಕರ್ಕಳ್ಳಿ ಗ್ರಾಮದ ಸೀಗಲುಡುವೆಯಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಗಾಳಿ ಮಳೆಗೆ ಮರದ ಕೊಂಬೆಯೊAದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ, ವಿದ್ಯುತ್ ತಂತಿ ತುಂಡಾಗಿ ಕೆಳಬಿದ್ದಿತ್ತು. ಇದೇ ಸಂದರ್ಭ ಸೀಗಲುಡುವೆ ಗ್ರಾಮದ ಚಂದ್ರಶೇಖರ್ ಅವರಿಗೆ ಸೇರಿದ ಜಾನುವಾರು ಮೇಯಲು ತೆರಳಿದ್ದು, ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದೆ.
ಸುಮಾರು ರೂ. ೫೦ ಸಾವಿರ ನಷ್ಟವಾಗಿದ್ದು, ಪರಿಹಾರ ಒದಗಿಸುವಂತೆ ಮಾಲೀಕರು ಮನವಿ ಮಾಡಿದ್ದಾರೆ. ಸ್ಥಳಕ್ಕೆ ಪಶು ವೈದ್ಯಕೀಯ ಇಲಾಖೆಯ ಅಧಿಕಾರಿ ಡಾ. ಬದಾಮಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.