ವೀರಾಜಪೇಟೆ, ಜೂ. ೨೬: ಹಿಂದಿನ ಕಾಲದಲ್ಲಿ ಓಲೆಗರಿಯಲ್ಲಿ ಬರೆದಿರುವ ಹಲವು ವಿಷಯಗಳು ಇಂದಿಗೂ ಪ್ರಚಲಿತದಲ್ಲಿವೆ. ಇದನ್ನು ಹಲವು ಮಂದಿ ನೂತನ ತಂತ್ರಜ್ಞಾನಕ್ಕೆ ಅಳವಡಿಸಿಕೊಂಡು ಇಂದಿನ ಪೀಳಿಗೆಗೆ ತಿಳಿಸಲಾಗುತ್ತಿದೆ. ಜ್ಞಾನದ ಭಂಡಾರವೆAದರೆ ಪುಸ್ತಕವೇ ಆಗಿದೆ ಎಂದು ತ್ರಿವೇಣಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಆಪಾಡಂಡ ಕಾರ್ಯಪ್ಪ ಅಭಿಪ್ರಾಯಪಟ್ಟರು.
ವೀರಾಜಪೇಟೆ ನಗರದ ಕೊಡವ ಸಮಾಜದ ಅಧೀನದಲ್ಲಿರುವ ತ್ರಿವೇಣಿ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಸಮಾಜ ಸೇವಕ ಕದ್ದಣಿಯಂಡ ಹರೀಶ್ ಬೋಪಣ್ಣ ಅವರಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟು ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಆಪಾಡಂಡ ಕಾರ್ಯಪ್ಪ ಅವರು, ವಿದ್ಯಾರ್ಜನೆಗೆ ವಿದ್ಯಾರ್ಥಿಗಳಿಗೆ ನೆರವಾಗಲು ಉಚಿತವಾಗಿ ನೋಟು ಪುಸ್ತಕಗಳನ್ನು ವಿತರಿಸುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಸಮಾಜ ಸೇವಕ ಕದ್ದಣಿಯಂಡ ಹರೀಶ್ ಬೋಪಣ್ಣ ಅವರು ಮಾತನಾಡಿ ಸೇವೆಯು ನಿಂತ ನೀರಲ್ಲ, ನದಿಯಂತೆ ಸಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ಜನಸಾಮಾನ್ಯರು ನಾನಾ ಸಮಸ್ಯೆಗಳನ್ನು ಎದುರಿಸಿದ್ದಾರೆ. ಇದನ್ನು ಅರಿತು ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವಂತೆ ತನ್ನ ಜಿಲ್ಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟು ಪುಸ್ತಕಗಳನ್ನು ವಿತರಣೆ ಮಾಡುವ ಕಲ್ಪನೆಯಿಂದಾಗಿ ಎಲ್ಲಾ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗಾಗಿ ನೋಟು ಪುಸ್ತಕಗಳ ವಿತರಣೆ ಮಾಡುತ್ತಿರುವುದಾಗಿ ಹೇಳಿದರು.
ಕೊಡವ ಸಮಾಜ ವೀರಾಜಪೇಟೆ ಅಧ್ಯಕ್ಷ ವಾಂಚೀರ ನಾಣಯ್ಯ ಅವರು ಮಾತನಾಡಿ, ದಾನಿಗಳು ಹಲವರು ಇದ್ದರೂ ಕೊಡುವ ಮನಸ್ಸು ಇರುವುದು ಬೆರಳೆಣಿಕೆಯಷ್ಟು. ಸಮಾಜಕ್ಕೆ ಒಳಿತು ಮಾಡುವ ಹಿತದೃಷ್ಟಿಯಿಂದ ಕದ್ದಣಿಯಂಡ ಹರೀಶ್ ಬೋಪಣ್ಣ ಅವರ ಸೇವೆಯನ್ನು ಈ ಸಮಾಜ ಸದಾ ಸ್ಮರಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶಾಲೆಯ ಒಂದನೇ ತರಗತಿಯಿಂದ ೧೦ ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟು ಪುಸ್ತಕಗಳನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಶಾಲಾ ಆಡÀಳಿತ ಮಂಡಳಿ ಕಾರ್ಯದÀರ್ಶಿಯಾಗಿರುವ ಅಮ್ಮಣಿಚಂಡ ಗಂಗಮ್ಮ, ಶಾಲಾ ಮುಖ್ಯೋಪಾಧ್ಯಾಯಿನಿ ಕವಿತಾ ಶೆಟ್ಟಿ ಉಪಸ್ಥಿತರಿದ್ದರು. ತ್ರಿವೇಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.