ಮಡಿಕೇರಿ: ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಡಿಕೇರಿ ವಕೀಲರ ಸಂಘ ಹಾಗೂ ನ್ಯಾಯಾಂಗ ನೌಕರರ ಸಂಘದ ವತಿಯಿಂದ ಮಡಿಕೇರಿ ನ್ಯಾಯಾಲಯದಲ್ಲಿ ತಾ. ೨೧ ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಭೀಮರಾವ್ ಜಿನರಾಲ್ಕರ್ ಲಗಮಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ಕೆ.ಡಿ. ದಯಾನಂದ ಅವರು ಅಧ್ಯಕ್ಷತೆ ವಹಿಸಿದ್ದರು. ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಕೆ.ಬಿ. ಸ್ವಾಗತಿಸಿದರು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಮುನಿರತ್ನಮ್ಮ ಸಿ.ಎನ್., ಅಪರ ಸಿವಿಲ್ ನ್ಯಾಯಾಧೀಶ ನಾಗೇಶ್ ಎನ್.ಎ., ನ್ಯಾಯಾಂಗ ಇಲಾಖೆಯ ಶಮಿ, ಜಯಪ್ಪ, ಇಂದುಕುಮಾರ್ ಇತರ ಸಿಬ್ಬಂದಿಗಳು ಭಾಗವಹಿಸಿದ್ದರು. ಯೋಗ ತರಬೇತುರಾದ ರಿಚಾ ಆನಂದ್ ಹಾಗೂ ಚೆನ್ನಾವೀರ ಯೋಗದ ಬಗ್ಗೆ ಮಾಹಿತಿ ನೀಡಿದರು.

ಪತಂಜಲಿ ಯೋಗ ಸಮಿತಿ ಶನಿವಾರಸಂತೆ: ಶನಿವಾರಸಂತೆಯ ಪತಂಜಲಿ ಯೋಗ ಸಮಿತಿ ವತಿಯಿಂದ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಯೋಗ ಶಿಬಿರಾರ್ಥಿಗಳು.

ದಕ್ಷಿಣ ಕೊಡಗಿನಲ್ಲಿ ಯೋಗ ದಿನಾಚರಣೆ *ಗೋಣಿಕೊಪ್ಪ: ಪೊನ್ನಂಪೇಟೆ, ವೀರಾಜಪೇಟೆ ತಾಲೂಕಿನ ಶಾಲಾ, ಕಾಲೇಜು ತಾ.ಪಂ, ಗ್ರಾ.ಪಂ. ಕಚೇರಿ, ಆಡಳಿತ ಕಚೇರಿ, ವಿವಿಧ ಇಲಾಖೆ ಕಚೇರಿಗಳಲ್ಲಿ ಮತ್ತು ಸಂಘ-ಸAಸ್ಥೆಗಳ ವತಿಯಿಂದ ಅಂರ‍್ರಾಷ್ಟಿçÃಯ ಯೋಗ ದಿನ ಆಚರಿಸಲಾಯಿತು.

ಗೋಣಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕ ಹೆಚ್.ಕೆ. ಕುಮಾರ್ ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಯೋಗ ಮಾಡುವ ಮೂಲಕ ಗಮನ ಸೆಳೆದರು.

ವೀರಾಜಪೇಟೆ-ದೇವಣಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲಾ ಬಿಳಗಿ ಅವರು ವಿದ್ಯಾರ್ಥಿಗಳು ಹಾಗೂ ಮುಖ್ಯ ಶಿಕ್ಷಕ ಲೋಕೇಶ್ ಮತ್ತು ಸಹಶಿಕ್ಷಕರೊಂದಿಗೆ ಯೋಗ ದಿನ ಆಚರಿಸಿದರು.

ಕಿರುಗೂರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರಾಜಮ್ಮ ಮತ್ತು ಸಹ ಶಿಕ್ಷಕಿಯರುಗಳಾದ ವೀಣಾ, ಶ್ರೀಜಾ ಅವರು ವಿದ್ಯಾರ್ಥಿಗಳಿಗೆ ಯೋಗ ಪ್ರದರ್ಶನವನ್ನು ತಿಳಿಸುವ ಮೂಲಕ ಆಚರಣೆ ನಡೆಯಿತು. ಸಾಯಿ ಶಂಕರ್ ವಿದ್ಯಾಸಂಸ್ಥೆ ಪ್ರಶಾಂತಿ ನಿಲಯ, ಅರುವತ್ತೊಕ್ಲು ಸರ್ವದೈವತಾ ವಿದ್ಯಾಸಂಸ್ಥೆ, ಪೊನ್ನಂಪೇಟೆ ಸಂತ ಅಂತೋಣಿ, ಗೋಣಿಕೊಪ್ಪದ ಸಂತ ಥೋಮಸ್, ಕೂರ್ಗ್ ಪಬ್ಲಿಕ್ ಶಾಲೆ, ಕಾಲ್ಸ್, ಕಾವೇರಿ ಪಾಲಿಟೆಕ್ನಿಕ್ ಕಾಲೇಜು, ಅನುದಾನಿತ ಪ್ರೌಢಶಾಲೆ, ಸರ್ಕಾರಿ ಪ್ರೌಢಶಾಲೆ, ಅತ್ತೂರು ನ್ಯಾಷನಲ್ ಅಕಾಡೆಮಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಯೋಗದÀ ಭಂಗಿಗಳನ್ನು ಪ್ರದರ್ಶಿಸಿ ಅಂರ‍್ರಾಷ್ಟಿçÃಯ ಯೋಗ ದಿನ ಆಚರಿಸಿದರು.

ಗೋಣಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಪ್ರದರ್ಶನದಲ್ಲಿ ಶಿಕ್ಷಕರುಗಳಾದ ದಮಯಂತಿ, ಅನಿತಾಕುಮಾರಿ, ಸತೀಶ್ ಬಿ.ಆರ್, ರಮಾನಂದ, ಸರಸ್ವತಿ, ನಿರ್ಮಲ, ಜೋಸ್ನಿಯ, ಜಯಶ್ರೀ, ಇಂದಿರಾ, ತ್ರಿವೇಣಿ, ಶಾರದ, ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಯೋಗ ಪ್ರದರ್ಶನದಲ್ಲಿ ಕಾಲೇಜು ಪ್ರಾಂಶುಪಾಲ ಶಿವಕುಮಾರ್, ಕರ್ನಾಟಕ ಪಬ್ಲಿಕ್ ಶಾಲೆಯ ಚಂಗಪ್ಪ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವಿಜಯ, ಎಸ್.ಡಿ.ಎಂ.ಸಿ. ಅಧ್ಯಕ್ಷ ಶರೀನ್, ಸಿ.ಆರ್.ಪಿ. ತಿರುನೆಲ್ಲಿಮಾಡ ಜೀವನ್, ಗ್ರಾ.ಪಂ. ಸದಸ್ಯ ರಾಮಕೃಷ್ಣ, ಯೋಗ ಶಿಕ್ಷಕ ಮಹೇಶ್ ಇದ್ದರು.

ಲಿಟ್ಲ್ ಫ್ಲವರ್ ವಿದ್ಯಾಸಂಸ್ಥೆ ಮಡಿಕೇರಿ: ಅಂರ‍್ರಾಷ್ಟಿçÃಯ ಯೋಗ ದಿನದ ಪ್ರಯುಕ್ತ ಲಿಟ್ಲ್ ಫ್ಲವರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ನಡೆಯಿತು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸುನಿತಾ ಪ್ರೀತು ಯೋಗ ಹಾಗೂ ಯೋಗ ದಿನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು.