ಮಡಿಕೇರಿ, ಜೂ. ೨೬: ಕೊಡಗು ಪತ್ರಿಕಾಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕ ಬಿ.ಎನ್. ಮನು ಶೆಣೈ (೬೩) ಅವರು ಹೃದಯಾಘಾತದಿಂದ ನಿಧನ ಹೊಂದಿದರು.
ವೀರಾಜಪೇಟೆ ನಗರದ ಸುಭಾಷ್ನಗರ ನಿವಾಸಿಯಾಗಿದ್ದ ಮನು ಶೆಣೈ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮನು ಶೆಣೈ ಅವರು ಲಂಕೇಶ್ ಪತ್ರಿಕೆಯ ವರದಿಗಾರರಾಗಿಯೂ ಕಾರ್ಯನಿರ್ವಹಿಸಿದ್ದರು.
(ಮೊದಲ ಪುಟದಿಂದ)
ಸAತಾಪ: ಕೊಡಗು ಪತ್ರಿಕಾ ಭವನ ನಿರ್ಮಾಣಕ್ಕೂ ತಮ್ಮದೇ ಆದ ಕೊಡುಗೆಯನ್ನು ನೀಡಿರುವ ಮನು ಶೆಣೈ ಅವರ ನಿಧನಕ್ಕೆ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಂತಾಪ ವ್ಯಕ್ತಪಡಿಸಿದೆ.
ಪತ್ರಿಕಾಭವನದಲ್ಲಿ ಸಂತಾಪ ಸಭೆ ನಡೆಸಿದ ಟ್ರಸ್ಟಿಗಳು ಮನು ಅವರ ನಿಧನಕ್ಕೆ ಕಂಬನಿ ಮಿಡಿದರು. ಟ್ರಸ್ಟ್ನ ಮಾಜಿ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ. ರಮೇಶ್, ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್, ಟ್ರಸ್ಟಿಗಳಾದ ವಿ.ಪಿ. ಸುರೇಶ್, ಜಿ. ಚಿದ್ವಿಲಾಸ್, ಎಚ್.ಟಿ. ಅನಿಲ್, ಶ್ರೀಧರ ಹೂವಲ್ಲಿ, ಕೆ. ತಿಮ್ಮಪ್ಪ, ಪತ್ರಿಕಾ ಭವನದ ವ್ಯವಸ್ಥಾಪಕಿ ಯಮುನಾ, ಸಿಬ್ಬಂದಿ ಸವಿತಾ ಹಾಜರಿದ್ದರು.
ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಪತ್ರಿಕಾಭವನ ಟ್ರಸ್ಟ್ ವತಿಯಿಂದ ವೀರಾಜಪೇಟೆಯ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸಂತಾಪ ಸಭೆ ನಡೆಸಲಾಯಿತು. ಕೊಡಗು ಪತ್ರಿಕಾ ಭವನ ಟ್ರಸ್ಟಿ ಟಿ.ಪಿ. ರಮೇಶ್, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕಸಾಪ ಅಧ್ಯಕ್ಷ ಎಂ.ಪಿ. ಕೇಶವಕಾಮತ್, ಕ್ರೆöÊಸ್ತ ಸಮಾಜ ಮುಖಂಡ ಕೆ.ಟಿ. ಬೇಬಿ ಮ್ಯಾಥ್ಯೂ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದು, ಸಂತಾಪ ಸೂಚಿಸಿದರು. ಮನು ಶೆಣೈ ನಿಧನಕ್ಕೆ ಶಾಸಕ ಅಪ್ಪಚ್ಚು ರಂಜನ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ವಕೀಲ ಎಂ.ಎ. ನಿರಂಜನ್, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಎಂ.ಪಿ. ಮುತ್ತಪ್ಪ ಮನುಶೆಣೈ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಮನುಶೆಣೈ ಅವರ ನಿಧನಕ್ಕೆ ಸುಂಟಿಕೊಪ್ಪ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.
ಸುಂಟಿಕೊಪ್ಪ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಬಿ. ವಿನ್ಸೆಂಟ್ ಅಧ್ಯಕ್ಷತೆಯಲ್ಲಿ ನಡೆದ ಸಂತಾಪ ಸೂಚಕ ಸಭೆಯಲ್ಲಿ ಜಿ.ಕೆ. ಬಾಲಕೃಷ್ಣ, ಎಂ.ಎಸ್. ಸುನೀಲ್, ಶಶಿಕುಮಾರ್ ರೈ, ಬಿ.ಡಿ. ರಾಜುರೈ, ಆಲ್ಪೆರ್ಡ್ ಡಿಸೋಜ ಮತ್ತಿತರರು ಇದ್ದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಖಲೀಲ್ ಮಡಿಕೇರಿ ಸಂತಾಪ ಸೂಚಿಸಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯರೂ ಆಗಿರುವ ದಕ್ಷಿಣ ಭಾರತ ಕರಾಟೆ ಮಂಡಳಿ ಅಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಎ.ಎಸ್. ಟಾಟು ಮೊಣ್ಣಪ್ಪ, ಡಿಸಿಸಿ ಸದಸ್ಯ ಅಬ್ದುಲ್ ರಹಿಮಾನ್ (ಬಾಪು), ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ ಮೊದಲಾದವರು ಸಂತಾಪ ಸೂಚಿಸಿದ್ದಾರೆ.
ಮನು ಶೆಣೈ ಅವರ ನಿಧನ ಹಿನ್ನೆಲೆಯಲ್ಲಿ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂತಾಪ ಸೂಚನೆ ಸಭೆ ನಡೆಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಚಂದ್ರಮೋಹನ್ ಹಾಗೂ ಪದಾಧಿಕಾರಿಗಳು ಇದ್ದರು.
ಮನು ಶೆಣೈ ಅವರ ನಿಧನಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಸೋಮವಾರಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು ಸಂತಾಪ ಸೂಚಿಸಿದೆ. ಕೊಡಗು ಗೌಡ ಸಮಾಜಗಳ ಒಕ್ಕೂಟವು ಕೂಡ ಮನು ಶೆಣೈ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತದೆ ಎಂದು ಅಧ್ಯಕ್ಷ ಸೂರ್ತಲೆ ಸೋಮಣ್ಣ ತಿಳಿಸಿದ್ದಾರೆ.