ಮಡಿಕೇರಿ, ಜೂ. ೨೭: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಎನ್ ಎಸ್ ಯು.ಐ ಘಟಕದ ಸದಸ್ಯರು ಜಿಲ್ಲಾ ಕಾಂಗ್ರೆಸ್ ಸಹಯೋಗದಲ್ಲಿ ಕೊಡಗು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ, ಅಗ್ನಿಪಥ್ ಯೋಜನೆಯನ್ನು ರದ್ದು ಪಡಿಸಲು ಜಿಲ್ಲಾಧಿಕಾರಿಗಳ ಮುಖೇನ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರು ಸೈನಿಕರಿಗೆ ಸೇವಾಭದ್ರತೆ ಇಲ್ಲದ ಯೋಜನೆಯನ್ನು ಕೇಂದ್ರ ಸರ್ಕಾರ ಯಾವುದೇ ಚರ್ಚೆ ನಡೆಸದೆ ಜಾರಿಗೊಳಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದರಿಂದ ದೇಶದ ಭದ್ರತೆಗೆ ಆತಂಕವಿದೆ ಎಂದು ಹೇಳಿದರು. ಯೋಧರನ್ನು ಕಡೆಗಣಿಸಿ ರುವ ಈ ಸರ್ಕಾರ ಮುಂದುವರಿ ಯಲು ಯಾವುದೇ ನೈತಿಕತೆ ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ಹಾನಗಲ್ ಅವರು ಮಾತನಾಡಿ ಯುವಕರನ್ನು ನಿರುದ್ಯೋಗಿ ಗಳಾಗಿ ರೂಪಿಸುವ ಯೋಜನೆ ಇದಾಗಿದ್ದು ಇದನ್ನು ರದ್ದುಪಡಿಸದಿದ್ದರೆ ಯುವ ಕಾಂಗ್ರೆಸ್ ಹೋರಾಟ ರೂಪಿಸುವುದಾಗಿ ಎಚ್ಚರಿಸಿದರು.
ಕಾಂಗ್ರೆಸ್ ಮುಖಂಡರಾದ ಡಾ ಮಂಥರ್ ಗೌಡ, ಟಿ.ಪಿ. ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ಮೀದೇರಿರ ನವೀನ್, ಅನಂತ್ ಕುಮಾರ್, ಇಸ್ಮಾಯಿಲ್, ಎನ್ಎಸ್ಯುಐ ಅಧ್ಯಕ್ಷ ರೋಷನ್ ಗಣಪತಿ, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಎಂ.ಎ. ಉಸ್ಮಾನ್, ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯಾ ಅಬ್ರಾರ್, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಮುಖಂಡರು ಗಳಾದ ಕೇಟೋಳಿ ಮೋಹನ್ರಾಜ್, ಟಿ.ಹೆಚ್. ಉದಯ್ಕುಮಾರ್, ಅಬ್ದುಲ್ ರಜಾಕ್, ಸದಾ ಮುದ್ದಪ್ಪ, ಪ್ರಕಾಶ್ ಆಚಾರ್ಯ, ಜೆ.ಸಿ. ಜಗದೀಶ್, ಹೂವಯ್ಯ, ಜನಾರ್ಧನ್, ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು, ಎನ್ಎಸ್ಯುಐ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.