ಮಡಿಕೇರಿ, ಜೂ. ೨೮: ಪ್ರಸಕ್ತ ವರ್ಷ ಮಳೆಗಾಲವನ್ನು ಎದುರಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲಾಡಳಿತದ ವತಿಯಿಂದ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿAದು ಶಾಸಕ
ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ ಸಮ್ಮುಖದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಚಿವರು ಮಳೆಗಾಲವನ್ನು ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆ ಬಗ್ಗೆ ಮಾಹಿತಿ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
೨೦೧೮ರಲ್ಲಿ ೩.೩ ಪ್ರಮಾಣದಲ್ಲಿ ಭೂಕಂಪನ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡು ಹೆಚ್ಚಿನ ಪ್ರಮಾಣದಲ್ಲಿ ಮಳೆಯೂ ಸುರಿದ ಕಾರಣ ಭಾರೀ ಭೂಕುಸಿತ ಸಂಭವಿಸಿತ್ತು. ಆದರೆ ಈ ಬಾರಿ ೨.೩ ಪ್ರಮಾಣದಲ್ಲಿ ಭೂಕಂಪನವಾಗಿದೆಯಾದರೂ ಎಲ್ಲಿಯೂ ಕೂಡ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿಲ್ಲ. ಆದರೂ ಈ ಬಾರಿ ಮಳೆಗಾಲವನ್ನು ಎದುರಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಅಪಾಯಕಾರಿ ಪ್ರದೇಶಗಳಲ್ಲಿ ವಾಸವಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಮುಂದಡಿ ಇಡಲಾಗಿದೆ. ಪರಿಹಾರ ಕೇಂದ್ರಗಳ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿರುವ ಜಲಾಶಯಗಳಲ್ಲಿ ನೀರಿನ ಮಟ್ಟದ ಬಗ್ಗೆ ಖುದ್ದು ಜಿಲ್ಲಾಧಿಕಾರಿಗಳೇ ಪ್ರತಿನಿತ್ಯ ಮಾಹಿತಿ ಪಡೆದುಕೊಂಡು ಅಗತ್ಯ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ಆರೋಗ್ಯ ಇಲಾಖೆಯಿಂದ ಅಗತ್ಯವಿರುವಷ್ಟು ವೈದ್ಯರು ಹಾಗೂ ಸಿಬ್ಬಂದಿಯ ನಿಯೋಜನೆಗೆ ಕ್ರಮಕೈಗೊಳ್ಳಲಾಗಿದೆ. ತುರ್ತು ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ತರಬೇತಿ ನೀಡುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಮಳೆಗಾಲದಲ್ಲಿ ಯಾವುದೇ ತೊಂದರೆಗಳಾಗದ ರೀತಿಯಲ್ಲಿ ಅಗತ್ಯ ಸಿಬ್ಬಂದಿ ಹಾಗೂ ಸಲಕರಣೆ ಗಳೊಂದಿಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಬಿ.ಸಿ. ನಾಗೇಶ್ ಮಾಹಿತಿ ನೀಡಿದರು.
ಗೊಬ್ಬರ ಸಮಸ್ಯೆ: ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವ ನಾಗೇಶ್ ಹಾಗೂ ಶಾಸಕ ಅಪ್ಪಚ್ಚು ರಂಜನ್
(ಮೊದಲ ಪುಟದಿಂದ) ಇವರುಗಳು ಜಿಲ್ಲೆಯಲ್ಲಿ ಗೊಬ್ಬರ ಸಮಸ್ಯೆ ಉಂಟಾಗದAತೆ ಗಮನ ಹರಿಸಲು ಕೃಷಿ ಇಲಾಖಾಧಿಕಾರಿ ಶಬಾನ ಶೇಕ್ ಅವರಿಗೆ ಸೂಚನೆ ನೀಡಿದರು. ಗೊಬ್ಬರ ಸರಬರಾಜು ಸಂಬAಧ ಯಾವುದೇ ಸಮಸ್ಯೆಗಳಿದ್ದರೂ ತಮ್ಮ ಗಮನಕ್ಕೆ ತರುವಂತೆ ಹೇಳಿದರು.
ವೀರಾಜಪೇಟೆ ಮಲೆತಿರಿಕೆಬೆಟ್ಟ ಹಾಗೂ ಅಯ್ಯಪ್ಪ ಬೆಟ್ಟಗಳು ಅಪಾಯಕಾರಿ ಪ್ರದೇಶಗಳಾಗಿದ್ದು, ಅಲ್ಲಿನ ನಿವಾಸಿಗಳ ಸುರಕ್ಷತೆ ಸಂಬAಧ ಮುಂಜಾಗ್ರತೆ ಕೈಗೊಳ್ಳುವಂತೆ ಶಾಸಕ ರಂಜನ್ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಚರಂಡಿಗಳಲ್ಲಿ ನೀರಿನ ಹರಿವು ಸ್ಥಗಿತಗೊಳ್ಳದಂತೆ ಗಮನ ಹರಿಸಬೇಕೆಂದು ಕೂಡ ಅವರು ಹೇಳಿದರು.
ಮುಂಗಾರು ಸಂದರ್ಭದಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಈಗಾಗಲೇ ೨೦೧೮ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಮನೆ ನೀಡಲಾಗಿದೆ. ಹಾಗೆಯೇ ಬಾಕಿ ಇರುವ ಮನೆಗಳ ಹಸ್ತಾಂತರ ಮಾಡಿ, ಅಗತ್ಯ ಮೂಲ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಪ್ರಾದೇಶಿಕ ಸಾರಿಗೆ ಕಚೇರಿ ಬಳಿ ನಿರ್ಮಾಣವಾಗಿರುವ ಮನೆಗಳ ಹಸ್ತಾಂತರಕ್ಕೆ ಬಾಕಿ ಇದ್ದು, ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತದೆ. ಜುಲೈ ಮೊದಲ ವಾರದಲ್ಲಿ ಮನೆ ಹಸ್ತಾಂತರಕ್ಕೆ ಸಿದ್ಧವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಅವರು ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಇದ್ದು, ಒತ್ತುವರಿ ತೆರವುಗೊಳಿಸಬೇಕು. ಈ ಸಂಬAಧ ಪ್ರಕರಣ ದಾಖಲಿಸುವಂತೆ ಸೂಚಿಸಿದರು.
ರಸ್ತೆ ಬದಿ ಕಟ್ಟಡ ನಿರ್ಮಾಣ ಮಾಡುವುದು ಕಂಡುಬAದಲ್ಲಿ ಗ್ರಾಮ ಪಂಚಾಯಿತಿ ಅಥವಾ ಸ್ಥಳೀಯ ಆಡಳಿತದಿಂದ ಯಾವುದೇ ಕಾರಣಕ್ಕೂ ಎನ್ಒಸಿ ನೀಡಬಾರದು ಎಂದು ಅಪ್ಪಚ್ಚು ರಂಜನ್ ತಾಕೀತು ಮಾಡಿದರು.
ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಪುರುಷೋತ್ತಮ, ಪಂಚಾಯತ್ ರಾಜ್ ಇಂಜಿನಿಯರ್ ನಾಗೇಂದ್ರಪ್ಪ ಅವರು ಮಳೆಗಾಲದಲ್ಲಿ ಚರಂಡಿಯಲ್ಲಿ ನೀರು ನಿಲ್ಲದಂತೆ ಕ್ರಮವಹಿಸಲಾಗುವುದು, ರಸ್ತೆ ಗುಂಡಿ ಮುಚ್ಚಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಮುಂಗಾರಿನಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣವಾಗದಂತೆ ಗಮನಹರಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರನ್ನು ನಿಯೋಜಿಸಲು ಕ್ರಮವಹಿಸಲಾಗಿದೆ ಎಂದರು.
ಸಭೆಯಲ್ಲಿ ಜಿ.ಪಂ. ಸಿಇಓ ಭಂವರ್ ಸಿಂಗ್ ಮೀನಾ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ, ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ, ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ಮತ್ತಿತರರು ಇದ್ದರು.