ಸುಂಟಿಕೊಪ್ಪ, ಜೂ. ೨೮: ಮಾದಾಪುರ ಶ್ರೀಮತಿ ಡಿ. ಚನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕ, ಸೋಮವಾರ ಪೇಟೆ ಅರಣ್ಯ ವಲಯ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್ನ ಕೊಡಗು ಜಿಲ್ಲಾ ಘಟಕ ಹಾಗೂ ಕಾಲೇಜಿನ ಹಾರಂಗಿ ಜಲಾ ನಯನ ಇಕೋ ಕ್ಲಬ್ನ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ಮಾಸಾಚರಣೆ ಅಂಗವಾಗಿ ಏರ್ಪಡಿಸಿದ್ದ ಹಸಿರು ಪರಿಸರ ಉತ್ಸವ ಹಾಗೂ ವನ ಸಂವರ್ಧನಾ ಅಭಿಯಾನ-೨೦೨೨ ಕಾರ್ಯಕ್ರಮದಲ್ಲಿ ಅರಣ್ಯ ಸಸಿನೆಟ್ಟು ಪರಿಸರ ಉತ್ಸವ ಆಚರಿಸಲಾಯಿತು.
ಪರಿಸರ ಸಂರಕ್ಷಣೆಯ ಮಹತ್ವ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷರೂ ಆದ ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮ ಕುಮಾರ್, ವಿಶ್ವ ಪರಿಸರ ದಿನವು ಒಂದು ದಿನಕ್ಕೆ ಮಾತ್ರ ಸೀಮಿತ ವಾಗಿರದೆ ಪ್ರತಿನಿತ್ಯವು ಪರಿಸರ ಉತ್ಸವದ ಮೂಲಕ ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವ ಕಾರ್ಯಗಳು ನಿರಂತರವಾಗಿ ನಡೆಯಬೇಕಿದೆ ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ ಮಾತನಾಡಿ, ಪರಿಸರದ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಭವಿಷ್ಯದ ದೃಷ್ಟಿಯಿಂದ ಅರಣ್ಯ, ಪರಿಸರ ಹಾಗೂ ಜೀವಿ ಸಂಕುಲಗಳ ಸಂರಕ್ಷಣೆಗಾಗಿ ಹೆಚ್ಚೆಚ್ಚು ಅರಣ್ಯ ಗಿಡ ಮರಗಳನ್ನು ಬೆಳೆಸುವ ಮೂಲಕ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದರು.
ಅರಣ್ಯ ಸಂರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಆರ್ ಎಫ್ಓ ಹೆಚ್.ಪಿ. ಚೇತನ್, ನಾವು ನೈಸರ್ಗಿಕ ಅರಣ್ಯ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಕರ್ನಲ್ ಬಿಜಿವಿ ಕುಮಾರ್, ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಹಾಗೂ ಹರದೂರು ಗ್ರಾ.ಪಂ. ಸದಸ್ಯೆ ಟಿ.ಪಿ. ಉಷಾ ಬಹುಮಾನ ವಿತರಿಸಿದರು.
ಕಾಲೇಜು ಪ್ರಾಂಶುಪಾಲ ಸಿ.ಜಿ. ಮಂದಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಚೈತನ್ಯ ಪ್ರತಿಜ್ಞಾ ವಿಧಿ ಬೋಧಿಸಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸ್ಥಾನೀಯ ಆಯುಕ್ತ ಎಚ್.ಆರ್. ಮುತ್ತಪ್ಪ, ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಸ್ಥೆ ಎನ್.ಎ. ರೇವತಿ, ಡಿಆರ್ಎಫ್ ವೈ.ಕೆ. ಜಗದೀಶ್, ಉರಗ ತಜ್ಞ ಬಿ. ರಘು, ಇಕೋ ಕ್ಲಬ್ ನ ಸಂಚಾಲಕಿ ಕೆ.ಎಸ್. ಅಶ್ವಿನಿ, ಅರಣ್ಯ ರಕ್ಷಕ ಪಿ.ಕೆ. ಚೇತನ್, ಅರಣ್ಯ ವೀಕ್ಷಕ ವೀರಪ್ಪ, ಸಿಬ್ಬಂದಿಗಳಾದ ವಿನು, ಹರ್ಷಿತ್, ನಂದೀಶ್, ಉಪನ್ಯಾಸಕರು, ಶಿಕ್ಷಕರು ಇದ್ದರು. ಉಪನ್ಯಾಸಕಿ ಬಿ.ಎಂ. ಪ್ರಮೀಳಾ ಕಾರ್ಯಕ್ರಮ ನಿರ್ವಹಿಸಿದರು.
ಗೈಡ್ಸ್ ಮತ್ತು ರೇಂಜರ್ಸ್ ತಂಡ, ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್ ಹಸಿರು ಪಡೆ ತಂಡ, ಎನ್.ಸಿ.ಸಿ. ಕೆಡೆಟ್ಗಳು, ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು, ಅರಣ್ಯ ಇಲಾಖೆಯ ಸಿಬ್ಬಂದಿ, ಹಸಿರು ಉತ್ಸವದಲ್ಲಿ ಭಾಗವಹಿಸಿ ಕಾಲೇಜು ಆವರಣದಲ್ಲಿ ಅರಣ್ಯ ಸಸಿಗಳನ್ನು ನೆಟ್ಟರು. ಇದೇ ವೇಳೆ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಸಂಬAಧಿಸಿದAತೆ ವಿವಿಧ ಪರಿಸರ ಘೋಷಣೆಗಳನ್ನು ಪ್ರಚಾರಪಡಿಸಿದರು. ನಂತರ ಉಪನ್ಯಾಸಕರು, ಶಿಕ್ಷಕರು, ಅರಣ್ಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಜೊತೆಗೂಡಿ ಕಾಲೇಜು ಆವರಣದಲ್ಲಿ ಅರಣ್ಯ ಗಿಡಗಳನ್ನು ನೆಟ್ಟರು.