ಮಡಿಕೇರಿ, ಜೂ. ೨೭: ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಪೂವಮ್ಮ ಪಿ.ಸಿ. ಅವರನ್ನು ವರ್ಗಾವಣೆ ಮಾಡಲಾಗಿದ್ದು, ವೀರಾಜಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಅಧೀಕ್ಷಕರಾಗಿ ನೇಮಿಸಲಾಗಿದೆ ಎಂದು ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಜನರಲ್ ಸರ್ಜನ್ ವರ್ಗಾವಣೆ

ಸೋಮವಾರಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜನರಲ್ ಸರ್ಜನ್ ಆಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸತೀಶ್ ಕುಮಾರ್ ಎನ್. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜನರಲ್ ಸರ್ಜನ್ ಆಗಿ ನೇಮಿಸಲಾಗಿದೆ.

ಶಸ್ತç ಚಿಕಿತ್ಸಕರ ಹುದ್ದೆಗೆ ನೇಮಕ

ವೀರಾಜಪೇಟೆ ತಾಲೂಕು ಆಸ್ಪತ್ರೆಯ ಸಾಮಾನ್ಯ ಶಸ್ತç ಚಿಕಿತ್ಸಕರ ಹುದ್ದೆಗೆ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಸಾಮಾನ್ಯ ಶಸ್ತç ಚಿಕಿತ್ಸಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಪ್ರಜ್ವಲ್ ಕುಮಾರ್ ಅವರನ್ನು ನೇಮಿಸಲಾಗಿದೆ.