ಕೂಡಿಗೆ, ಜೂ. ೨೮: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕೂಡಿಗೆಯ ಕೃಷಿ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ಕಾರ್ಯದರ್ಶಿಗಳಿಗೆ ಸಹಕಾರ ಕಾಯ್ದೆ-ಕಾನೂನು, ಹಾಲಿನ ಶೇಖರಣೆ, ಸಂಗ್ರಹಣೆ ಹಾಗೂ ಲೆಕ್ಕಪತ್ರ ನಿರ್ವಹಣೆ ಕುರಿತಾದ ವಿಶೇಷ ಶಿಕ್ಷಣ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮವನ್ನು ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕಮಾರ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್ನ ಹಿರಿಯ ನಿರ್ದೇಶಕ ಬಿ.ಎ. ರಮೇಶ್ ಚಂಗಪ್ಪ ವಹಿಸಿ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ತರಬೇತಿಯನ್ನು ನೀಡುವುದರಿಂದ ಸಂಘದ ಬೆಳವಣಿಗೆ ಪೂರಕವಾಗುವುದು. ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ನಿರ್ದೇಶಕರು ಸದುಪ ಯೋಗಪಡಿಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ರಾದ ಎನ್.ಎ. ರವಿ ಬಸಪ್ಪ, ಎನ್.ಎಂ. ಉಮೇಶ್ ಉತ್ತಪ್ಪ, ಪಿ.ಬಿ. ಯತೀಶ್, ಕನ್ನಂಡ ಸಂಪತ್, ಅತಿಥಿ ಉಪನ್ಯಾಸಕರಾದ ಎಂ.ಎA. ಶ್ಯಾಮಲಾ, ಡಿ.ಎನ್. ಚಂದ್ರಶೇಖರ, ಹಾಸನ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಬಿ.ಎ. ವೀಣಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಸೇರಿದಂತೆ ಜಿಲ್ಲೆಯ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು, ಕಾರ್ಯದರ್ಶಿಗಳು ಭಾಗವಹಿಸಿದ್ದರು. ಸಂಪನ್ಮೂಲಗಳ ವ್ಯಕ್ತಿಗಳು ಸಹಕಾರ ಕಾಯ್ದೆ ಕಾನೂನು, ಹಾಲಿನ ಶೇಖರಣೆ, ಸಂಗ್ರಹಣೆ ಹಾಗೂ ಲೆಕ್ಕಪತ್ರ ನಿರ್ವಹಣೆ ಕುರಿತಾದ ಸಂಪೂರ್ಣ ಮಾಹಿತಿಯನ್ನು ನೀಡಿದರು. ಯೋಗೇಂದ್ರ ನಾಯಕ್ ಸ್ವಾಗತಿಸಿ, ವಂದಿಸಿದರು.