ಕೊಡ್ಲಿಪೇಟೆ, ಜೂ. ೨೭: ಗ್ರಾಮ ಮಟ್ಟದಿಂದ ಜೆಡಿಎಸ್ ಪಕ್ಷದ ಸಂಘಟನೆಗೆ ಒತ್ತು ನೀಡಲಾಗಿದ್ದು, ಮುಂದಿನ ವಿಧಾನ ಸಭಾ ಚುನಾವಣೆಗೆ ಪಕ್ಷವನ್ನು ಬಲಿಷ್ಠಗೊಳಿಸಲಾಗುವುದು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಹೆಳಿದರು.

ಕೊಡ್ಲಿಪೇಟೆಯ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಹೋಬಳಿ ಜಾತ್ಯತೀತ ಜನತಾದಳ ಕಾರ್ಯ ಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕರ್ತರ ಶ್ರಮದಿಂದ ಜೆಡಿಎಸ್ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಿ ಮುಂದಿನ ವಿಧಾನ ಸಭಾ ಚುನಾವಣೆ ಸೇರಿದಂತೆ ಜಿಲ್ಲಾ ಹಾಗೂ ತಾ.ಪಂ. ಚುನಾವಣೆಗೆ ಸಿದ್ದತೆ ನಡೆಸಲಾಗುವುದು ಎಂದರು.

ಜಿಲ್ಲೆಯ ಗಡಿಭಾಗದ ಕೊಡ್ಲಿಪೇಟೆಯಿಂದ ಸಂಘಟನಾ ಪರ್ವ ಪ್ರಾರಂಭವಾಗಿದೆ. ಮುಂದಿನ ಚುನಾವಣೆಗಳನ್ನು ಎದುರಿಸಲು ಬೂತ್ ಮಟ್ಟದಲ್ಲಿ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ನಿಷ್ಠಾವಂತ ಕಾರ್ಯಕರ್ತರನ್ನು ರೂಪುಗೊಳಿಸಿ ಎಲ್ಲಾ ಹೋಬಳಿ ಗಳಲ್ಲೂ ಕಾರ್ಯಕರ್ತರ ಸಮಾವೇಶ ಗಳನ್ನು ಆಯೋಜಿಸಲಾಗುವುದು ಎಂದ ಅವರು, ಕಾರ್ಯಕರ್ತರೇ ಜೆಡಿಎಸ್‌ನ ಶಕ್ತಿ ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ ಮಾತನಾಡಿ, ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ಜೆಡಿಎಸ್ ಪಕ್ಷದ ಬಗ್ಗೆ ಬದ್ದತೆ ಇರುವ ಕಾರ್ಯಕರ್ತರ ತಂಡವಿದೆ. ಕಾರ್ಯಕರ್ತರನ್ನು ಇನ್ನಷ್ಟು ಚುರುಕುಗೊಳಿಸಲು ಸ್ಥಳೀಯ ಮಟ್ಟದಲ್ಲಿ ಸಮಾವೇಶಗಳನ್ನು ಆಯೋಜಿಸಲಾಗುವುದು ಎಂದರು.

ಕ್ಷೇತ್ರದ ಗ್ರಾಮೀಣ ಪ್ರದೇಶಗಳು ಇನ್ನೂ ಅಭಿವೃದ್ಧಿಯಾಗಿಲ್ಲ. ಹೀಗಾಗಿ ಜನತೆ ಬದಲಾವಣೆ ಬಯಸಿದ್ದು ಹೊಸಮುಖವನ್ನು ಎದುರು ನೋಡುತ್ತಿದ್ದಾರೆ. ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿದರೆ ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದರು.

ಜಿಲ್ಲಾ ಮಹಿಳಾ ಘಟಕದ ನೂತನ ಅಧ್ಯಕ್ಷೆ ಪುಷ್ಪಾವತಿ ರಮೇಶ್ ಮಾತನಾಡಿ, ಪಕ್ಷ ಸಂಘಟನೆಯಲ್ಲಿ ಮಹಿಳೆಯರು ಹೆಚ್ಚು ತೊಡಗಿಸಿ ಕೊಳ್ಳಬೇಕು. ಮುಖಂಡರುಗಳು ರಾಜಕೀಯ ಇಚ್ಚಾಶಕ್ತಿ ಹೊಂದಿರುವ ಮಹಿಳೆಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳ ಬೇಕು ಎಂದು ಅಭಿಪ್ರಾಯಿಸಿದರು.

ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಅಲ್ಪಸಂಖ್ಯಾತರ ಸಬಲೀಕರಣ ಆಗಿಲ್ಲ. ಇದುವರೆಗೂ ಕಾಂಗ್ರೆಸ್ ಪಕ್ಷವನ್ನು ಮಾತ್ರ ಬೆಂಬಲಿಸಿದ ಕಾರಣ ಇಂದಿಗೂ ಸಂಕಷ್ಟಗಳನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೆಡಿಎಸ್ ಪಕ್ಷದ ಆಡಳಿತದಲ್ಲಿ ಜಾತಿ, ಧರ್ಮಾಧಾರಿತ ವಿಷÀಯಗಳಿಗೆ ಆದ್ಯತೆ ನೀಡದೆ ಅಭಿವೃದ್ಧಿಗೆ ಮಾತ್ರ ಪ್ರಾಮು ಖ್ಯತೆ ನೀಡಲಾಗುತ್ತಿತ್ತು ಎಂದರು.

ಯುವ ಘಟಕದ ಜಿಲ್ಲಾಧ್ಯಕ್ಷ ಸಿ.ಎಲ್. ವಿಶ್ವ ಮಾತನಾಡಿ, ನಾಯಕ ರುಗಳು ಹಾಗೂ ಕಾರ್ಯಕರ್ತರುಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕು. ನಿಷ್ಠಾವಂತ ಯುವ ಕಾರ್ಯಕರ್ತ ರನ್ನು ಗುರುತಿಸಿ ಜಿಲ್ಲಾ ಮತ್ತು ತಾ.ಪಂ. ಚುನಾವಣೆಗಳಲ್ಲಿ ಅವಕಾಶ ಕಲ್ಪಿಸಬೇಕೆಂದರು.

ಜಿ.ಪA. ಮಾಜಿ ಸದಸ್ಯ ಪುಟ್ಟರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹೆಚ್.ಆರ್. ಸುರೇಶ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ನಾಗರಾಜು, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಆದಿಲ್ ಪಾಷ, ಸ್ಥಳೀಯ ಮುಖಂಡ ಸುಬ್ರಹ್ಮಣ್ಯಾಚಾರ್ ಅವರುಗಳು ಮಾತನಾಡಿದರು.

ಮುಖಂಡರಾದ ಎಸ್.ಡಿ. ತಮ್ಮಯ್ಯ, ಭೂಪಾಲ್, ರಾಜೇಶ್, ಡಿ.ಬಿ. ವಿಜಯ್, ಕಾಂತರಾಜ್, ದೇವಪ್ಪಗೌಡ, ಇಸ್ಮಾಯಿಲ್, ಡಿ.ಎನ್. ವಸಂತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪಕ್ಷದ ಹೋಬಳಿ ಅಧ್ಯಕ್ಷರನ್ನಾಗಿ ಬಿ.ಕೆ. ದಿನೇಶ್ ಕುಮಾರ್ ಬೆಂಬಳೂರು, ಯುವ ಘಟಕದ ಅಧ್ಯಕ್ಷರಾಗಿ ಡಿ.ಎನ್.ವಸಂತ್ ದೊಡ್ಡಕೊಡ್ಲಿ ಮತ್ತು ಮಹಿಳಾ ಘಟಕದ ಅಧ್ಯಕ್ಷರಾಗಿ ಕುಸುಮಾ ಸುಧಾಕರ್ ಹುಲುಕೋಡು ಅವರುಗಳನ್ನು ನೇಮಕ ಮಾಡಲಾಯಿತು. ಇದೇ ಸಂದರ್ಭ ವಿವಿಧ ಪಕ್ಷಗಳ ಕಾರ್ಯಕರ್ತರುಗಳು ಜೆಡಿಎಸ್ ಸೇರ್ಪಡೆಯಾದರು.