ಗೋಣಿಕೊಪ್ಪ: ಗೋಣಿಕೊಪ್ಪ ಅರುವತೊಕ್ಕಲುವಿನ ಸರ್ವದೈವತಾ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿದ್ದ ಗುಂಬಿರ ಅನ್ಯ ಜೀವನ್ ಯೋಗದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಶಿಕ್ಷಕಿಯರಾದ ಹೆಮ್ಮಚಿಮನೆ ಧರಣಿ ಯೋಗ ಪ್ರದರ್ಶಿಸಿದರು. ಇವರೊಂದಿಗೆ ವಿದ್ಯಾಸಂಸ್ಥೆಯ ಪ್ರಾಥಮಿಕ ಪ್ರೌಢಶಾಲೆಯ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಯೋಗದಲ್ಲಿ ಭಾಗವಹಿಸಿದ್ದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಕಾಡ್ಯಮಾಡ ಪ್ರಕಾಶ್ ಮೊಣ್ಣಪ್ಪ, ಪ್ರಾಂಶುಪಾಲೆ ಲಲಿತಾ ಮೊಣ್ಣಪ್ಪ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಮನೆಯಪಂಡ ಶೀಲ ಬೋಪಣ್ಣ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಿ.ಎನ್. ಪ್ರಮೋದ್ ಉಪಸ್ಥಿತರಿದ್ದರು. ಶಿಕ್ಷಕಿ ಅಮ್ರಿನ್ ಬಾನು ಸ್ವಾಗತಿಸಿದರು. ಶಿಕ್ಷಕಿ ಭವ್ಯ ವಂದಿಸಿದರು. ಶಿಕ್ಷಕಿ ಧರಣಿ ಕಾರ್ಯಕ್ರಮ ನಿರೂಪಿಸಿದರು.ನಡಿಕೇರಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಪೊನ್ನಂಪೇಟೆ: ಇಲ್ಲಿಗೆ ಸಮೀಪದ ನಡಿಕೇರಿ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕಿ ಸೌಮ್ಯ ಅವರ ಮಾರ್ಗದರ್ಶನದಲ್ಲಿ ಯೋಗ ದಿನ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಶಾಂತಿ ಕುಮಾರಿ ಇದ್ದರು.

ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜು ಸುಂಟಿಕೊಪ್ಪ: ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಯೋಗಾಸನ ಪ್ರದರ್ಶನ ಮಾಡಿದರು. ಪ್ರಾಣಾಯಾಮ, ವೃಕ್ಷಾಸನ, ಪಾದಾಹಸ್ತನ, ಸೂರ್ಯ ನಮಸ್ಕಾರಗಳನ್ನು ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ನೇರವೇರಿಸಿ ಯೋಗದ ಮಹತ್ವವನ್ನು ಪ್ರಚುರಪಡಿಸಿದರು.

ಪ್ರತಿಯೊಂದು ಆಸನದ ಪ್ರಾಮುಖ್ಯತೆಯನ್ನು ಅಧ್ಯಾಪಕರಾದ ಈಶ ಅವರು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಈ ಸಂದರ್ಭ ಕಾಲೇಜಿನ ಪ್ರಾಚಾರ್ಯ ಪಿ.ಎಸ್. ಜಾನ್, ಉಪನ್ಯಾಸಕರುಗಳಾದ ಪಿಲಿಫ್‌ವಾಸ್, ಪದ್ಮಾವತಿ, ಕವಿತಾ ಕೆ.ಸಿ., ಕವಿತಾಭಕ್ತಾ, ಜಯಶ್ರೀ, ನದಿಯೊ, ದೀಕ್ಷಿತ ಹಾಗೂ ಕನಕ ಹಾಜರಿದ್ದರು.