ಮಡಿಕೇರಿ, ಜೂ. ೨೭: ಪಶುಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ ಅವರು ತಾ. ೨೮ ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಬೆಳಿಗ್ಗೆ ೧೧ ಗಂಟೆಗೆ ಕೂಡಿಗೆ ಜಾನುವಾರು ಸಂವರ್ಧನಾ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ ೩ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ. ಸಿ. ಭಾಸ್ಕರ ನಾಯ್ಕ ತಿಳಿಸಿದ್ದಾರೆ.