ಮಡಿಕೇರಿ, ಜೂ.೨೭: ಪ್ರಸಕ್ತ (೨೦೨೨-೨೩) ನೇ ಸಾಲಿಗೆ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಹ ವಿಶೇಷಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ತತ್ಸಮಾನ ಪರೀಕ್ಷೆಗಳಲ್ಲಿ ಶೇ.೬೦ ಕ್ಕಿಂತ ಹೆಚ್ಚಿನ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ೧೦ ನೇ ತರಗತಿ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರು ಪಾವತಿಸುವ ಯೋಜನೆ, ವಿಶೇಷಚೇತನರಿಗೆ ಅವಶ್ಯವಿರುವ ಸಾಧನ ಸಲಕರಣೆಗಳು, ವಿಶೇಷಚೇತನ ವ್ಯಕ್ತಿಗಳನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗಳಿಗೆ ಪ್ರೋತ್ಸಾಹ ಧನ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಸ್ಪರ್ಧಾ ಚೇತನ, ಸಾಧನೆ ಪ್ರತಿಭೆ, ಅಂಧ ಮಹಿಳೆಗೆ ಜನಿಸುವ ಮೊದಲ ಎರಡು ಶಿಶುಗಳ ಪಾಲನೆಗಾಗಿ ಸಹಾಯ ಧನ, ೧೦ನೇ ತರಗತಿ ಉತ್ತೀರ್ಣರಾದ ನಿರುದ್ಯೋಗಿ ವಿಶೇಷಚೇತನರಿಗೆ ನಿರುದ್ಯೋಗ ಭತ್ಯೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ವಿಶೇಷಚೇತನರಿಗೆ ಕೋಚಿಂಗ್‌ಗಾಗಿ ಸಹಾಯ ಧನ, ೧೦ನೇ ತರಗತಿ ನಂತರದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ನೀಡುವ ಯೋಜನೆ, ಆಧಾರ ಯೋಜನೆಯಡಿ ಸ್ವಯಂ ಉದ್ಯೋಗಕ್ಕಾಗಿ ೧.೦೦ಲಕ್ಷದ ದವರೆಗೆ ಸಾಲ ಸಹಾಯ ಧನ ಹಾಗೂ ದೈಹಿಕ ವಿಶೇಷಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ನೀಡುವ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಜುಲೈ ೧೫ ರೊಳಗೆ ಆಯಾಯ ಗ್ರಾಮ ಪಂಚಾಯತ್‌ಗಳಲ್ಲಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.೦೮೨೭೨-೨೯೫೮೨೯ನ್ನು ಸಂಪರ್ಕಿಸಿ ವಿಶೇಷಚೇತನರ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳಿAದ ಹಾಗೂ ಆಯಾಯ ತಾಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.