ಚೆಯ್ಯಂಡಾಣೆ, ಜೂ. ೨೭: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಚೇರಂಬಾಣೆಯ ವತಿಯಿಂದ ವಿಶ್ವ ಮಲೇರಿಯಾ ದಿನಾಚರಣೆಯ ಪ್ರಯುಕ್ತ ಮಲೇರಿಯಾ ವಿರೋಧಿ ಮಾಸಾಚರಣೆಯ ಕುರಿತು ಶಾಲಾ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರವನ್ನು ನಡೆಸಲಾಯಿತು.

ಕಾರ್ಯಾಗಾರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ - ಪಾರ್ವತಿ, ಜಿಲ್ಲಾ ಸರ್ವೇಕ್ಷಣಾ ಕಚೇರಿಯಿಂದ ಎಂಟಮಲಾಜಿಸ್ಟ್, ಮಂಜುನಾಥ್, ಜಿಲ್ಲಾ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮತ್ತು ಜಿಲ್ಲಾ ತಾಲೂಕು ಹಿರಿಯ ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಹಿರಿಯ ಕಿರಿಯ ಪ್ರಾ.ಆ.ಸು ಅಧಿಕಾರಿಗಳು, ಸರ್ಕಾರಿ ಹಾಗೂ ಖಾಸಗಿ ಶಾಲಾ ಶಿಕ್ಷಕರು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.