ಕೂಡಿಗೆ, ಜೂ. ೨೭: ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಸೆರೆವಾಸ ಅನುಭವಿಸಿದ ಕೂಡಿಗೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಎಂ.ಬಿ. ಜಯಂತ ಅವರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನವರು ಕೂಡಿಗೆಯಲ್ಲಿ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ತಾಲೂಕು ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ, ಕೂಡುಮಂಗಳೂರು ಗ್ರಾಮ ಪಂಚಾಯತಿ ಸದಸ್ಯರಾದ ಕೆ.ಕೆ. ಭೋಗಪ್ಪ, ಚಂದ್ರು ಮೂಡ್ಲಿಗೌಡ, ಗೌರಮ್ಮ ಹಾಗೂ ಇತರರು ಇದ್ದರು.