ನಾಪೋಕ್ಲು, ಜೂ. ೨೭: ೨೦೨೧-೨೨ ರ ಸಾಲಿನ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ಇಲ್ಲಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ಪಾತ್ರವಾಗಿದೆ. ಮಡಿಕೇರಿಯ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರಿಂದ ಶಾಲಾ ಮುಖ್ಯ ಶಿಕ್ಷಕಿ ಬಿ.ಎಂ.ಶಾರದಾ ಪ್ರಶಸ್ತಿ ಪತ್ರ ಪಡೆದುಕೊಂಡರು.