ಮಡಿಕೇರಿ, ಜೂ. ೨೯: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಕೆ. ಹರಿಪ್ರಸಾದ್ ಆಯ್ಕೆಗೊಂಡಿದ್ದು, ಇವರಿಗೆ ಕೊಡಗು ಸಾಮಾಜಿಕ ಜಾಲತಾಣದ ಉಸ್ತುವಾರಿಯನ್ನು ನೀಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಕಾರ್ಯದರ್ಶಿ ಹಾಗೂ ಮಡಿಕೇರಿ ಬ್ಲಾಕ್ ಸಂಘಟನಾ ಕಾರ್ಯದರ್ಶಿ ಎಂ.ಎನ್. ರೌಫ್ ತಿಳಿಸಿದ್ದಾರೆ.