ಸಿದ್ದಾಪುರ, ಜೂ. ೨೮: ಕೇಂದ್ರ ಸರ್ಕಾರ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚು ಅನುದಾನಗಳನ್ನು ನೀಡುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿಯ ನವೀಕೃತಗೊಂಡ ಕಟ್ಟಡ ಮತ್ತು ಕುಡಿಯುವ ನೀರು ಘಟಕ ಹಾಗೂ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ ಮಾಡಿ ಬಳಿಕ ಸ್ಥಳೀಯ ಶಾದಿ ಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಜಲಜೀವನ್ ಕಾರ್ಯಕ್ರಮದ ಯೋಜನೆಯಡಿಯಲ್ಲಿ ಪ್ರತಿಯೊಂದು ಮನೆಗೆ ಹೆಚ್ಚು ಅನುದಾನ ಬಿಡುಗಡೆಗೊಳಿಸ ಲಾಗುತ್ತಿದೆ. ಯೋಜನೆಯು ಹಂತ ಹಂತವಾಗಿ ಕಾರ್ಯಗತವಾಗುತ್ತಿದೆ. ಜಲಜೀವನ್ ಯೋಜನೆ ಅಡಿಯಲ್ಲಿ ಬಿಡುಗಡೆಗೊಳಿಸಿದ ಅನುದಾನ ದಿಂದಾಗಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗಿದೆ ಎಂದು ತಿಳಿಸಿದರು. ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಲ್ಲೊಂದಾದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡುವ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.

ನದಿ ಪಾತ್ರದಲ್ಲಿ ಮನೆಗೆ ವಿರೋಧ

ಕಾವೇರಿ ನದಿ ಪಾತ್ರದಲ್ಲಿ ಮನೆಗಳು ಪ್ರವಾಹಕ್ಕೆ ಸಿಲುಕಿ ಹಾನಿಯಾಗಿದ್ದು,

(ಮೊದಲ ಪುಟದಿಂದ) ಈ ಹಿನ್ನೆಲೆಯಲ್ಲಿ ನದಿ ತೀರದಲ್ಲಿ ಯಾರೂ ಕೂಡ ಮನೆ ನಿರ್ಮಾಣ ಮಾಡಬಾರದೆಂದು ಸಂಸದರು ಹೇಳಿದರು. ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಆದೇಶವಿದ್ದರೂ ಮನೆಗಳು ನಿರ್ಮಾಣವಾಗುತ್ತಿದ್ದು, ಇದಕ್ಕೆ ಪಂಚಾಯಿತಿಯಿAದ ಅನುಮತಿ ನೀಡಬಾರದೆಂದು ಪಂಚಾಯಿತಿಗೆ ಸೂಚನೆ ನೀಡಿದರು. ಜೀವ ನದಿಯಾದ ಕಾವೇರಿಯನ್ನು ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ನದಿಯ ಪಾವಿತ್ರö್ಯತೆಗೆ ಧಕ್ಕೆಯಾಗದಂತೆ ಹಾಗೂ ನದಿಗೆ ಮಾಂಸ ಹಾಗೂ ತ್ಯಾಜ್ಯ ವಸ್ತುಗಳನ್ನು ಹಾಕದಂತೆ ಗ್ರಾ.ಪಂ. ಎಚ್ಚರವಹಿಸುವಂತೆ ಸಲಹೆ ನೀಡಿದರು.

ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರು ಸೇರಿದಂತೆ ಕಾರ್ಮಿಕರು ಹೆಚ್ಚಿರುವ ಈ ಭಾಗದಲ್ಲಿ ಮುಂದಿನ ದಿನಗಳಲ್ಲಿ ಪದವಿ ಕಾಲೇಜನ್ನು ಪ್ರಾರಂಭಿಸಲು ಪ್ರಯತ್ನಿಸಲಾಗುವುದೆಂದು ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ಜಿಲ್ಲೆಯ ವಿವಿಧ ಗ್ರಾ.ಪಂ.ಗಳಲ್ಲಿ ಗ್ಯಾಸ್ ಪೈಪ್ ಲೈನ್‌ಗಳನ್ನು ಪ್ರಾರಂಭಿಸಲಾಗುವುದೆAದು ತಿಳಿಸಿದರು.

ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಮಾತನಾಡಿ, ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಅಭಿವೃದ್ಧಿಗೆ ಈಗಾಗಲೇ ರೂ. ೧೦ ಕೋಟಿ ಅನುದಾನ ನೀಡಿದ್ದು, ಶಾಲಾ ಕೊಠಡಿಗಳ ನಿರ್ಮಾಣಕ್ಕೆ ರೂ. ೩ ಕೋಟಿ ನೀಡಲಾಗಿದೆ. ನೆಲ್ಲಿಹುದಿಕೇರಿ ಭಾಗಕ್ಕೆ ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಕೂಡ ಅನುದಾನ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವನ್ನು ನೀಡಬೇಕೆಂದು ಕರೆ ನೀಡಿದರು. ಗ್ರಾ.ಪಂ. ಆಡಳಿತ ಮಂಡಳಿ ಯಾವುದೇ ಪಕ್ಷದ ಬೆಂಬಲಿತವಾಗಿದ್ದರೂ ಆಡಳಿತ ನಡೆಸುವ ಸಂದರ್ಭ ಅಭಿವೃದ್ಧಿ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ನೆಲ್ಲಿಹುದಿಕೇರಿಯ ಗ್ರಾ.ಪಂ. ವ್ಯಾಪ್ತಿಯಲ್ಲಿ ೨೦೧೯ ರಂದು ಪ್ರವಾಹಕ್ಕೆ ಸಿಲುಕಿ ನೂರಾರು ಮನೆಗಳು ನೆಲಸಮಗೊಂಡಿವೆ. ಆದರೆ ಜನಪ್ರತಿನಿಧಿಗಳು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿಕೊಡದೇ ಸಂತ್ರಸ್ತರ ಬಗ್ಗೆ ಟೀಕೆ ಮಾಡುವುದು ಹಾಗೂ ನದಿ ತೀರದಲ್ಲಿ ವಾಸ ಮಾಡಬಾರದೆಂದು ಜನಪ್ರತಿನಿಧಿಗಳು ಪ್ರಸ್ತಾಪಿಸುವುದು ಸರಿಯಾದ ಕ್ರಮವಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈಗಾಗಲೇ ಅರೆಕಾಡು ಬಳಿ ಸಂತ್ರಸ್ತರಿಗೆ ಪುನರ್ವಸತಿಗೆ ಗುರುತಿಸಿರುವ ಜಾಗದಲ್ಲಿ ಸರ್ಕಾರ ಮನೆಗಳ ನಿರ್ಮಾಣ ಮಾಡಿಕೊಡಬೇಕೆಂದು ಒತ್ತಾಯಿಸಿದರು. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ವಿವಿಧೆಡೆಗಳಲ್ಲಿ ಭೂಮಿ ಕಂಪಿಸುತ್ತಿದ್ದು, ಇದೀಗ ಮತ್ತೆ ಮಳೆಗಾಲ ಆರಂಭಗೊAಡಿದ್ದು, ೩ ವರ್ಷಗಳಿಂದ ಈ ಭಾಗದಲ್ಲಿ ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸಿಕೊಡದೇ ಇರುವ ಬಗ್ಗೆ ಜನಪ್ರತಿನಿಧಿಗಳು ಆತ್ಮಾವಲೋಕನ ಮಾಡಕೊಳ್ಳಬೇಕೆಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ನೆಲ್ಲಿಹುದಿಕೇರಿ ಗ್ರಾ.ಪಂ. ಅಧ್ಯಕ್ಷ ಸಾಬು ವರ್ಗೀಸ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರುಗಳಾದ ಸುನಿತಾ ಮಂಜುನಾಥ್, ಎಂ.ವಿ. ವಿಜಯ, ನೆಲ್ಲಿಹುದಿಕೇರಿ ಗ್ರಾ.ಪಂ. ಉಪಾಧ್ಯಕ್ಷೆ ಧಮಯಂತಿ, ತಾ.ಪಂ. ಮಾಜಿ ಅಧ್ಯಕ್ಷ ವಿ.ಕೆ. ಲೋಕೇಶ್, ಅಭ್ಯತ್‌ಮಂಗಲ ಸಹಕಾರ ಸಂಘದ ಅಧ್ಯಕ್ಷ ಪಿ.ಸಿ. ಅಚ್ಚಯ್ಯ, ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಖಜಾಂಚಿ ಜೋಸೆಫ್ ಶ್ಯಾಂ ಹಾಗೂ ವಿವಿಧ ಇಲಾಖಾಧಿಕಾರಿಗಳು ಹಾಗೂ ಗ್ರಾ.ಪಂ. ಸದಸ್ಯರುಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ಕಳೆದ ಬಾರಿ ಕೊರೊನಾ ಹಾಗೂ ಪ್ರವಾಹದ ಸಂದರ್ಭದಲ್ಲಿ ಸೇವೆ ಸಲ್ಲಿಸಿದ ವಾರಿರ‍್ಸ್ಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ಪಿಡಿಓ ಅನಿಲ್ ಕುಮಾರ್ ಸ್ವಾಗತಿಸಿ, ಮುಸ್ತಫಾ ನಿರೂಪಿಸಿ, ವಂದಿಸಿದರು.