ಮಡಿಕೇರಿ, ಜೂ.೨೯: ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ವಿಪತ್ತು ನಿರ್ವಹಣೆ ಸಂಬAಧ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಸಂಬAಧ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳು ಹಾಗೂ ಕೋವಿಡ್ ನಿಯಂತ್ರಣಕ್ಕೆ ವಹಿಸಲಾಗಿರುವ ಕ್ರಮಗಳ ಬಗ್ಗೆ ಬುಧವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಿಂದ ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವುದರ ಜೊತೆಗೆ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನ ಹರಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಈ ಬಾರಿ ಸರಾಸರಿ ಮಳೆಯ ಪ್ರಮಾಣ ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆ ಆದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವ ಸಂಬAಧ ಪರಿಹಾರ ಕೇಂದ್ರಗಳ ಸ್ಥಾಪನೆ, ಪರಿಹಾರ ಕೇಂದ್ರದಲ್ಲಿ ಬೆಡ್ಶೀಟ್, ಶೌಚಾಲಯ, ಬಿಸಿನೀರು ಮತ್ತಿತರ ಮೂಲ ಸೌಕರ್ಯ ಒದಗಿಸಲು ಮುಂದಾಗಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ, ಪೂರ್ವ ಮುಂಗಾರು ಸಂದರ್ಭದಲ್ಲಿ ಉತ್ತಮ ಮಳೆಯಾಗಿದೆ. ಈ ಬಾರಿ ಸರಾಸರಿ ಮಳೆಯ ಪ್ರಮಾಣ ಕಡಿಮೆ ಇದೆ. ೧೬ ಮಡಿಕೇರಿ, ಜೂ.೨೯: ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ವಿಪತ್ತು ನಿರ್ವಹಣೆ ಸಂಬAಧ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಸಂಬAಧ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳು ಹಾಗೂ ಕೋವಿಡ್ ನಿಯಂತ್ರಣಕ್ಕೆ ವಹಿಸಲಾಗಿರುವ ಕ್ರಮಗಳ ಬಗ್ಗೆ ಬುಧವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಿಂದ ಪ್ರಾಕೃತಿಕ ವಿಕೋಪ ಸಂಭವಿಸಿದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವುದರ ಜೊತೆಗೆ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನ ಹರಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಈ ಬಾರಿ ಸರಾಸರಿ ಮಳೆಯ ಪ್ರಮಾಣ ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆ ಆದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವ ಸಂಬAಧ ಪರಿಹಾರ ಕೇಂದ್ರಗಳ ಸ್ಥಾಪನೆ, ಪರಿಹಾರ ಕೇಂದ್ರದಲ್ಲಿ ಬೆಡ್ಶೀಟ್, ಶೌಚಾಲಯ, ಬಿಸಿನೀರು ಮತ್ತಿತರ ಮೂಲ ಸೌಕರ್ಯ ಒದಗಿಸಲು ಮುಂದಾಗಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ, ಪೂರ್ವ ಮುಂಗಾರು ಸಂದರ್ಭದಲ್ಲಿ ಉತ್ತಮ ಮಳೆಯಾಗಿದೆ. ಈ ಬಾರಿ ಸರಾಸರಿ ಮಳೆಯ ಪ್ರಮಾಣ ಕಡಿಮೆ ಇದೆ. ೧೬ ಸೇರಿದಂತೆ ಅಗತ್ಯ ಉಪಕರಣಗಳನ್ನು ಸಿದ್ಧತೆ ಮಾಡಿಕೊಳ್ಳಬೇಕು. ಬೋಟ್ ಸರಿಯಾಗಿದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಬೇಕು. ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ಪರಿವರ್ತಕಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಎಲ್ಲಾ ಹಂತದ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದು ವಿ.ಅನ್ಬುಕುಮಾರ್ ಹೇಳಿದರು.
ಈ ಬಗ್ಗೆ ಮಾಹಿತಿ ನೀಡಿದ ಸೆಸ್ಕ್ ಇಇ ಅಶೋಕ್ ಅವರು ಜಿಲ್ಲೆಯಲ್ಲಿ ೧ ಸಾವಿರ ವಿದ್ಯುತ್ ಕಂಬಗಳು ದಾಸ್ತಾನು ಇವೆ. ಹೆಚ್ಚುವರಿ ವಿದ್ಯುತ್ ಟ್ರಾನ್ಸ್ಫಾರ್ಮರ್ಗಳೂ ಇದೆ. ಹಾಗೆಯೇ ೧೧೦ ‘ಕಿರಿಯ ಪವರ್ ಮ್ಯಾನ್’ಗಳನ್ನು ನಿಯೋಜಿಸಿ ಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.
ಪ್ರಾಕೃತಿಕ ವಿಕೋಪ ಎದುರಿಸುವ ಗ್ರಾಮ ಪಂಚಾಯಿತಿಗಳಿಗೆ ಸೀಮೆಎಣ್ಣೆ ಪೂರೈಸುವಂತಾಗಬೇಕು. ಆ ನಿಟ್ಟಿನಲ್ಲಿ ಆಹಾರ ಇಲಾಖೆಯ ಆಯುಕ್ತರ ಜೊತೆ ಚರ್ಚಿಸಲಾಗುವುದು. ಪ್ರವಾಹ ಹಾಗೂ ಭೂಕುಸಿತ ಪ್ರದೇಶಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಆದ್ಯತೆ ನೀಡುವಲ್ಲಿ ಮುಂದಾಗಬೇಕು ಎಂದು ವಿ.ಅನ್ಬುಕುಮಾರ್ ಹೇಳಿದರು.
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಕೊಡಗು ಜಿಲ್ಲೆಗೆ ಹೆಚ್ಚುವರಿಯಾಗಿ ಸೀಮೆ ಎಣ್ಣೆ ಪೂರೈಕೆಗೆ ಮನವಿ ಮಾಡಲಾಗಿದೆ ಎಂದರು. ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಇರುವ ಬಗ್ಗೆ ಮಾಹಿತಿ ಇದ್ದು, ಯಾವುದೇ ಕಾರಣಕ್ಕೂ ರಸಗೊಬ್ಬರ ‘ಅಭಾವ’ ಇದೆ ಎಂಬ ವರದಿ ಕೇಳಿ ಬರಬಾರದು. ಆ ನಿಟ್ಟಿನಲ್ಲಿ ಕಾಲ ಕಾಲಕ್ಕೆ ರಸಗೊಬ್ಬರ ಪೂರೈಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಕೋವಿಡ್ ನಿಯಂತ್ರಣ ಮತ್ತು ಲಸಿಕೆಯ ಪ್ರಗತಿ ಸಂಬAಧಿಸಿದAತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು, ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣವಾಗದಂತೆ ಎಚ್ಚರವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.
‘ಅಧಿಕಾರಿಗಳು ಆದೇಶ ಮಾಡುವುದರ ಜೊತೆಗೆ ಅನುಷ್ಠಾನ ಮಾಡಬೇಕು. ಆದೇಶ ಮಾಡಿ ಸುಮ್ಮನಿದ್ದರೆ ಸಾಲದು, ಪಾಲಿಸಬೇಕು ಎಂದು ವಿ.ಅನ್ಬುಕುಮಾರ್ ಕಿವಿಮಾತು ಹೇಳಿದರು.’ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಕೋವಿಡ್ ನಿಯಂತ್ರಣದಲ್ಲಿದೆ. ಲಸಿಕಾ ಕಾರ್ಯಕ್ರಮವು ಶೇ.೧೦೦ ರಷ್ಟು ಆಗಿದೆ ಎಂದು ಮಾಹಿತಿ ನೀಡಿದರು. ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಜಲಜೀವನ್ ಮಿಷನ್ ಯೋಜನೆ ಸಂಬAಧಿಸಿದAತೆ ಮಾಹಿತಿ ನೀಡಿದರು.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ಚಂದನ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್, ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಸಂಸ್ಥೆಯ ವಿಜ್ಞಾನಿಗಳಾದ ಡಾ.ರಮೇಶ್ ಮತ್ತು ಡಾ.ಜಗದೀಶ್ ಅವರು ಅವರು ಪ್ರಾಕೃತಿಕ ವಿಕೋಪ ಬಗ್ಗೆ ಹಲವು ಮಾಹಿತಿ ನೀಡಿದರು. ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.