ಕೂಡಿಗೆ, ಜೂ. ೨೮: ಕೂಡಿಗೆ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯುತ್ತಮ ಅಂಕಗಳಿಸಿದ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವಿದ್ಯಾರ್ಥಿನಿ ಯರಾದ ಡಿ.ಜಿ. ಚಂದನ ಮತ್ತು ಕೆ.ಎ. ಫಾತಿಮತ್ ಸಹಲ ಅವರನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಡಾ. ಸದಾಶಿವಯ್ಯ ಎಸ್ ಪಲ್ಲೇದ್, ಶಾಲಾ ಆಡಳಿತ ಮಂಡಳಿ, ಶಿಕ್ಷಕರ ವೃಂದ, ಸಿಬ್ಬಂದಿ ವರ್ಗ, ವಿದ್ಯಾರ್ಥಿನಿಯರ ಪೋಷಕರು ಹಾಜರಿದ್ದರು.