ಮಡಿಕೇರಿ, ಜೂ. ೨೮: ಕರ್ನಾಟಕ ರಾಜ್ಯ ಸರಕಾರ ಗೋಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೊಳಿಸಿದ್ದು, ಗೋಹತ್ಯೆ ಆಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕಬೇಕು. ಜುಲೈ ೧೦ ರಂದು ನಡೆಯುವ ಬಕ್ರೀದ್ ಹಬ್ಬದಂದು ಒಂದೇ ಒಂದು ಹಸು ಕಸಾಯಿಖಾನೆ ಸೇರಬಾರದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಾಣಿಗಳ ರಕ್ಷಣೆಯ ಜವಾಬ್ದಾರಿ ನಮ್ಮ ಇಲಾಖೆಯ ಮೇಲಿದೆ. ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ನಿರ್ಮಾಣ ಮಾಡಲು ಕ್ರಮವಹಿಸಲಾಗಿದೆ. ಅದರಂತೆ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಾಣಿಗಳ ರಕ್ಷಣೆಯ ಜವಾಬ್ದಾರಿ ನಮ್ಮ ಇಲಾಖೆಯ ಮೇಲಿದೆ. ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ನಿರ್ಮಾಣ ಮಾಡಲು ಕ್ರಮವಹಿಸಲಾಗಿದೆ. ಅದರಂತೆ ಮಡಿಕೇರಿ ಸಮೀಪದ ಕೆ.ನಿಡುಗಣೆ ಯಲ್ಲಿ ಗೋಶಾಲೆ ನಿರ್ಮಿಸಲಾಗಿದೆ. ಇಲ್ಲಿಗೆ ಹೆಚ್ಚುವರಿ ೨೫ ಎಕರೆ ಜಾಗದ ಅವಶ್ಯಕತೆ ಇರುವುದು ಗಮನಕ್ಕೆ ಬಂದಿದ್ದು, ಅಲ್ಲೇ ಸುತ್ತಲೂ ಇರುವ ಗೋಮಾಳ ಜಾಗವನ್ನು ಸುಪರ್ಧಿಗೆ ತೆಗೆದುಕೊಳ್ಳಲಾಗುವುದು. ನಿರ್ಮಾಣ ಹಂತದಲ್ಲಿರುವ ಗೋಶಾಲೆಗೆ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಸೆಪ್ಟೆಂಬರ್ ಒಳಗೆ ಗೋಶಾಲೆ ನಿರ್ಮಾಣ ಪೂರ್ಣಗೊಳಿಸಬೇಕು. ಜಿಲ್ಲಾ ಪಂಚಾಯ್ತಿ ಅಗತ್ಯ ನೆರವು ನೀಡಬೇಕೆಂದು ಸೂಚಿಸಿದರು. ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಈ ಬಗ್ಗೆ ಮಾತನಾಡಿ, ಗೋಶಾಲೆ ಸುತ್ತಲು ‘ಫೆನ್ಸಿಂಗ್’ ಅಳವಡಿಸಲು ಕ್ರಮವಹಿಸುವಂತೆ ಸಲಹೆ ನೀಡಿದರು.
ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಜಿಲ್ಲೆಯಲ್ಲಿರುವ ಸಿಬ್ಬಂದಿಗಳ ಕೊರತೆ ಯನ್ನು ನೀಗಿಸಬೇಕು.
(ಮೊದಲ ಪುಟದಿಂದ) ಈ ನಿಟ್ಟಿನಲ್ಲಿ ತುರ್ತಾಗಿ ೨೦ ಡಿ ದರ್ಜೆ ಸಿಬ್ಬಂದಿಗಳನ್ನು ಜಿಲ್ಲೆಗೆ ನಿಯೋಜಿಸಬೇಕು. ಇದರಿಂದ ಪಶುಪಾಲನ ಇಲಾಖೆ ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯ. ಜೊತೆಗೆ ಕೊಡಗು-ಕೇರಳ ಗಡಿಯಲ್ಲಿ ಅಕ್ರಮ ಗೋ ಸಾಗಾಟ ತಡೆಗೆ ಕಣ್ಗಾವಲಿಡುವಂತೆ ಹೇಳಿದರು.
ಈ ಬಗ್ಗೆ ಮಾತನಾಡಿದ ಸಚಿವರು, ೪೦೦ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಪ್ರಾಶಸ್ತö್ಯದಲ್ಲಿ ಜಿಲ್ಲೆಗೆ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ದೇಶದಲ್ಲಿ ಮೊದಲ ಬಾರಿಗೆ ಜಾರಿಗೆ ತಂದಿರುವ ಪ್ರಾಣಿ ಸಹಾಯವಾಣಿಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಗಡಿಗಳಲ್ಲಿ ಎಚ್ಚರವಹಿಸುವಂತೆ ನಿರ್ದೇಶಿಸಿದರು. ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಸುರೇಶ್ ಭಟ್ ಅವರು ಇಲಾಖೆ ಮೂಲಕ ಕೈಗೊಂಡ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಅಧಿಕಾರಿಗಳಿಗೆ ಸಚಿವರ ಪ್ರಶ್ನೆ
ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ತಾನು ಸಚಿವನಾದ ಮೇಲೆ ರೂಪಿಸಿದ ಯೋಜನೆಗಳ ಬಗ್ಗೆ ಪ್ರಶ್ನಿಸಿದರು. ಇದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉತ್ತರಿಸಿದರು. ಹೇಳಲು ಬಿಟ್ಟು ಹೋದ ಯೋಜನೆಯನ್ನು ಅವರೇ ತಿಳಿಸಿದರು.
ಮೊದಲು ಇಲಾಖೆಯ ಯೋಜನೆಯ ಬಗ್ಗೆ ತಿಳುವಳಿಕೆ ಇರಬೇಕು. ಸಮನ್ವಯತೆಯಿಂದ ಕೆಲಸ ಮಾಡಿದರೆ ಮಾತ್ರ ಯೋಜನೆ ಅನುಷ್ಠಾನ ಸಾಧ್ಯ. ಇಲಾಖೆ ಮೇಲ್ದರ್ಜೆಗೇರಲು ಪ್ರತಿಯೊಬ್ಬರು ಶ್ರಮಿಸುವಂತೆ ಕಿವಿ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ಉಪ ವಿಭಾಗಧಿಕಾರಿ ನಂಜುAಡೇಗೌಡ, ಇಲಾಖೆಯ ಅಪರ ನಿರ್ದೇಶಕ ರವಿಕುಮಾರ್, ಮೈಸೂರು ವಲಯ ಜಂಟಿ ನಿರ್ದೇಶಕ ವೀರಭದ್ರಯ್ಯ, ವಿಶೇಷ ಕರ್ತವ್ಯಾಧಿಕಾರಿಗಳಾದ ಬಾಸ್ಕರ್ ನಾಯಕ್, ಜಯಪ್ರಕಾಶ್ ಹಾಜರಿದ್ದರು.