ಮಡಿಕೇರಿ, ಜೂ. ೨೮: ಅಕ್ರಮವಾಗಿ ಚಿಪ್ಪು ಹಂದಿಯ ಚಿಪ್ಪನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಅರಣ್ಯ ಸಂಚಾರಿ ದಳ ಬಂಧಿಸಿದೆ.

ತಾಳತ್‌ಮನೆ ಜಂಕ್ಷನ್‌ನ ಬಸ್ ತಂಗುದಾಣದ ಬಳಿ ಮನೋಜ್ ಬಿ ಮತ್ತು ಮೊಹಮ್ಮದ್ ಇಮ್ತಿಯಾಜ್ ಎಂಬವರುಗಳು ಅಕ್ರಮವಾಗಿ ೧೭ ಕೆ.ಜಿ. ೫೦೦ ಗ್ರಾಂನಷ್ಟು ಚಿಪ್ಪು ಹಂದಿಯ ಚಿಪ್ಪನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದಾರೆ.

ಸಿ.ಐ.ಡಿ. ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ. ಶರತ್‌ಚಂದ್ರ ನಿರ್ದೇಶನದಲ್ಲಿ ಮಡಿಕೇರಿ ಸಿ.ಐ.ಡಿ. ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಚಂದ್ರಕಾAತ್ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ. ಸಿ.ಯು. ಸವಿ, ಹೆಡ್‌ಕಾನ್ಸ್ಟೇಬಲ್ ಗಳಾದ ಶೇಖರ್, ರಾಜೇಶ್, ಯೋಗೇಶ್, ರಾಘವೇಂದ್ರ, ಮೋಹನ ಮತ್ತು ಕಾನ್ಸ್ಟೇಬಲ್‌ಗಳಾದ ಸ್ವಾಮಿ ಮತ್ತು ಮಂಜುನಾಥ ಕಾರ್ಯಾ ಚರಣೆಯಲ್ಲಿ ಪಾಲ್ಗೊಂಡಿದ್ದರು.