ಬಾಳೆಲೆ, ಜೂ. ೨೮: ಕೊಟ್ಟಗೇರಿ ಮಹಾವಿಷ್ಣು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಅರಮಣಮಾಡ ಸತೀಶ್ ದೇವಯ್ಯ ಅವರು ಆಯ್ಕೆಯಾಗಿದ್ದಾರೆ. ಇವರು ನಿಟ್ಟೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಮತ್ತು ಕೊಡಗು ಹಿತರಕ್ಷಣಾ ಸಮಿತಿ ಕಾರ್ಯದರ್ಶಿಗಳಾಗಿದ್ದಾರೆ.

ಕಾರ್ಯದರ್ಶಿಯಾಗಿ ಅಳಮೇಂಗಡ ರೋಷನ್, ಉಪಾಧ್ಯಕ್ಷರಾಗಿ ಅಳಮೇಂಗಡ ದಿಲು ತಿಮ್ಮಯ್ಯ ಆಯ್ಕೆಯಾಗಿದ್ದಾರೆ.