ಮಡಿಕೇರಿ, ಜೂ. ೨೯: ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಉದ್ಯೋಗಿನಿ ಯೋಜನೆಯಡಿ ರಾಷ್ಟಿçÃಕೃತ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ ೨೩ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ೦೮೨೭೨-೨೯೫೦೮೭ನ್ನು ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ-ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ (ಹಂದಿ, ಆಡು, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿಪಾರ್ಲರ್, ಟೈಲರಿಂಗ್, ವ್ಯಾಪಾರ, ಮತ್ತಿತರ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು ೧೮ ರಿಂದ ೫೫ ವರ್ಷ ವಯೋಮಿತಿಗೊಳಪಟ್ಟು ಬಡತನ ರೇಖೆಯ ಒಳಪಡುವ ಪಡಿತರ ಚೀಟಿ ಹೊಂದಿದ ಮಹಿಳೆಯರಿಗೆ ಅವಕಾಶವಿರುತ್ತದೆ.
೧೮ ರಿಂದ ೫೫ ವರ್ಷದೊಳಗಿನ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ/ ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ ರೂ.೧ ಲಕ್ಷದಿಂದ ರೂ. ೩ ಲಕ್ಷ ಹಾಗೂ ಶೇ.೫೦ ಸಹಾಯಧನ ನೀಡಲಾಗುವುದು ಮತ್ತು ಕುಟುಂಬದ ವಾರ್ಷಿಕ ಆದಾಯ ರೂ. ೨ ಲಕ್ಷಕ್ಕೆ ಮೀರಿರಬಾರದು. ಜಾತಿ ಪ್ರಮಾಣಪತ್ರ, ಆದಾಯ ದೃಢೀಕರಣ ಪತ್ರ (ಪರಿಶಿಷ್ಟ ಜಾತಿ / ಪಂಗಡದ) ವರೆಗೆ ಮಾತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಪೋಟೋ, ಇತರೆ ಮಹಿಳೆಯರಿಗೆ ಘಟಕ ವೆಚ್ಚ ರೂ. ೧ ಲಕ್ಷದಿಂದ ರೂ. ೩ ಲಕ್ಷ ಹಾಗೂ ಶೇ. ೩೦ ಸಹಾಯಧನ ನೀಡಲಾಗುವುದು ಮತ್ತು ಕುಟುಂಬದ ವಾರ್ಷಿಕ ಆದಾಯ ರೂ.೧೫೦೦೦೦ ಕ್ಕೆ ಮೀರಿರಬಾರದು. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಲಗತ್ತಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.