ಮಡಿಕೇರಿ, ಜೂ. ೨೯: ನೂಪುರ್ ಶರ್ಮಾರನ್ನು ಬೆಂಬಲಿಸಿದ ಎಂಬ ಕಾರಣಕ್ಕಾಗಿ ರಾಜಸ್ಥಾನದ ಉದಯಪುರದÀ ಯುವಕ ಕನ್ಹಯ್ಯ ಲಾಲ್ ಅವರ ಹತ್ಯೆ ಮಾಡಿದ ಹೇಯ ಕೃತ್ಯವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್- ಭಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ತಾ.೩೦ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಕಚೆೆÃರಿಗೆ ಮೆರವಣಿಗೆಯ ಮೂಲಕ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ವಿಶ್ವ ಹಿಂದೂ ಪರಿಷದ್- ಭಜರಂಗದಳ-ಹಿAದೂ ಜಾಗರಣ ವೇದಿಕೆ ಪ್ರಕಟಣೆ ತಿಳಿಸಿದೆ.