*ಗೋಣಿಕೊಪ್ಪ, ಜೂ. ೨೯: ಅಮೃತ ಭಾರತಿಗೆ ಕನ್ನಡದಾರತಿ ೭೫ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಪೊನ್ನಂಪೇಟೆ ರಾಮಕೃಷ್ಣ ಶಾರದಾ ಶ್ರಮದ ಸಂಭವ ನಂದಾಜಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಹಕಾರ ನೀಡಿ ಶ್ರಮಿಸಿದವರನ್ನು ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ ಮತ್ತು ಶಾಸಕ ಕೆ.ಜಿ. ಬೋಪಯ್ಯ ಸನ್ಮಾನಿಸಿದರು.

ವೀರಾಜಪೇಟೆ ತಾಲೂಕು ಸಾಮರ್ಥ್ಯ ಸೌಧ ಸಭಾಂಗಣದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮ ದಲ್ಲಿ ವಿವಿಧ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳನ್ನು ಮತ್ತು ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಗಳನ್ನು ತಾಲೂಕು ಮಟ್ಟದ ಅಧಿಕಾರಿಗಳನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕಾರ್ಯ ಕ್ರಮದ ಸಂಪೂರ್ಣ ನೇತೃತ್ವವನ್ನು ವಹಿಸಿ ಯಶಸ್ವಿ ಕಾರ್ಯಕ್ರಮವನ್ನು ನಿರ್ವಹಿಸಲು ಶ್ರಮಿಸಿದ ಜಿ.ಪಂ. ಉಪಕಾರ್ಯದರ್ಶಿ ಲಕ್ಷಿ÷್ಮ ಅವರ ಸೇವೆಯನ್ನು ಶ್ಲಾಘಿಸಿದರು.

ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಎನ್.ಎಸ್. ಪ್ರಶಾಂತ್ ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ ಮತ್ತು ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಾ ವೆಂಕಟೇಶ್, ಉಪಾಧ್ಯಕ್ಷೆ ಬೊಟ್ಟಂಗಡ ದಶಮಿ ಸದಾ, ಸದಸ್ಯ ರಾಮಕೃಷ್ಣ, ಅರುವತೊಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮನೆಯಪಂಡ ಸೋಮಣ್ಣ, ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ಮನೆಯಪಂಡ ಶೀಲ ಬೋಪಣ್ಣ, ರೇಖಾ ಶ್ರೀಧರ್, ಪುತ್ತಾಮನೆ ಅನೀಲ್, ಅರುಣ್ ಭೀಮಯ್ಯ, ವಾಸು ಉತ್ತಪ್ಪ, ಹಿರಿಯ ನಾಗರಿಕ ವೇದಿಕೆಯ ಮೂಕಳೆರ ಕುಶಾಲಪ್ಪ, ಕಾಟಿಮಾಡ ಜಿಮ್ಮಿ ಅಣ್ಣಯ್ಯ, ಮತ್ರಂಡ ಅಪ್ಪಚ್ಚು, ಐನಂಡ ಸುಬ್ರಮಣಿ, ಬೋಪಣ್ಣ, ಪತ್ರಕರ್ತ ಜಗದೀಶ್ ಜೋಡುಬೀಟಿ ಸೇರಿದಂತೆ ಸ್ವಾತಂತ್ರ÷್ಯ ಹೋರಾಟದಲ್ಲಿ ಭಾಗವಹಿಸಿದ ಮಲ್ಲಂಡ ಮಾದಯ್ಯ ಅವರ ಜ್ಞಾಪಕಾರ್ಥವಾಗಿ ಮಲ್ಲಂಡ ಮಧುದೇವಯ್ಯ ಅವರು ಸನ್ಮಾನಕ್ಕೆ ಭಾಜನರಾದರು. ಈ ಸಂದರ್ಭ ಇಲಾಖೆಯ ಅಧಿಕಾರಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಅಭಿನಂದಿಸಿ ದರು. ತಾಲೂಕು ವೈದ್ಯಾಧೀಕಾರಿ ಯತಿರಾಜ್, ಜಿ.ಪಂ. ಇಂಜಿನಿಯರ್ ಮಹಾದೇವ್, ಸಿ.ಡಿ.ಪಿ.ಓ ರಾಜೇಶ್, ಐಟಿಡಿಪಿ ಅಧಿಕಾರಿ ಗುರುಶಾಂತಪ್ಪ, ಗೋಣಿಕೊಪ್ಪ ವೃತ್ತ ನಿರೀಕ್ಷಕ ಗೋವಿಂದರಾಜು, ಶ್ರೀಮಂಗಲ ಕಂದಾಯ ಪರಿವೀಕ್ಷಕ ಸುದೀಂದ್ರ ಹಾಗೂ ಸಮಿತಿಯ ಪದಾಧಿಕಾರಿಗಳು ಇದ್ದರು.