ಸಿದ್ದಾಪುರ, ಜೂ. ೨೯: ಜಾನುವಾರುಗಳನ್ನು ಸಾಯಿಸುತ್ತಿದ್ದ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖಾಧಿಕಾರಿಗಳು ಸಿಬ್ಬಂದಿ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದರೂ, ಹುಲಿಯ ಚಲನ ವಲನ ಪತ್ತೆಯಾಗಿಲ್ಲ ಎಂದು ಅರಣ್ಯ ಇಲಾಖಾಧಿಕಾರಿಗಳು ತಿಳಿಸಿದ್ದಾರೆ. ಮಾಲ್ದಾರೆ ಸಮೀಪದ ಬಾಡಗ ಬಾಣಂಗಾಲ ಗ್ರಾಮದ ಮಾರ್ಗೊಲ್ಲಿ ಕಾಫಿ ತೋಟದ ಒಳಗೆ ಕಂಡು ಬಂದಿದ್ದ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖಾಧಿಕಾರಿ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಸುತ್ತಾಡುತ್ತಿದ್ದಾರೆ. ಅಲ್ಲದೇ ಇತ್ತೀಚಿಗೆ ಹುಲಿಯು ಸಾಯಿಸಿದ ಹಸುವಿನ ಮೃತದೇಹವನ್ನು ಅದೇ ಜಾಗದಲ್ಲಿ ಇರಿಸಲಾಗಿದ್ದು, ಆ ಜಾಗಕ್ಕೂ ಹುಲಿಯು ಬರುತ್ತಿಲ್ಲವೆನ್ನಲಾಗಿದೆ. ಹುಲಿಯ ಸೆರೆಗೆ ಅರಣ್ಯ ಇಲಾಖೆ ಎಲ್ಲಾ ಸಿದ್ಧತೆಯನ್ನು ಕೈಗೊಂಡಿದ್ದರೂ ಹುಲಿಯ ಸುಳಿವು ಸಿಕ್ಕಿಲ್ಲ