ಕುಶಾಲನಗರ, ಜೂ. ೨೯: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪಟ್ಟಣ ಪಂಚಾಯಿತಿಯಿAದ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿರುವ ಬಗ್ಗೆ ಸಂತೆ ಮಾರುಕಟ್ಟೆ ಹಾಗೂ ಅಂಗಡಿಗಳನ್ನು ಪರಿಶೀಲಿಸಲಾಯಿತು.

ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಹಾಗೂ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಯಿತು. ಸುಮಾರು ೬ ಕೆ.ಜಿ. ಪ್ಲಾಸ್ಟಿಕ್ ವಶಪಡಿಸಿಕೊಂಡು ೮೦೦ ರೂಪಾಯಿಗಳನ್ನು ದಂಡ ವಸೂಲಿಸಲಾಗಿದೆ.