ಮಡಿಕೇರಿ, ಜೂ. ೩೦: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ೨೦೨೨-೨೩ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆ, ಸಾಂಪ್ರದಾಯಿಕ, ಕುಶಲಕರ್ಮಿ ವೃತ್ತಿದಾರರ ಸಾಲ ಯೋಜನೆಗಳಲ್ಲಿ ಸುವಿಧಾ ತಂತ್ರಾAಶದ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದು. ಹಾಗೂ ನಿಗಮದ ವೆಬ್‌ಸೈಟ್ hಣಣಠಿs://ಞmmಜ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ಸಂಖ್ಯೆ. ೦೮೦-೨೨೩೭೪೮೩೨ ಮತ್ತು ೯೬೦೬೦೬೬೩೮೯ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ದೂ. ೦೮೨೭೨-೨೨೧೬೫೬ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ ೩ ರೊಳಗೆ ಸುವಿಧಾ ತಂತ್ರಾAಶದ ಮುಖಾಂತರ ಸಲ್ಲಿಸುವಂತೆ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.