ಮಡಿಕೇರಿ, ಜೂ.೩೦: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಅವರನ್ನು ಹತ್ಯೆ ಮಾಡಿದ ಘಟನೆ ಅತ್ಯಂತ ಅಮಾನುಷವಾಗಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡಗು ಜಿಲ್ಲಾ ವಕ್ಫ್ ಸಮಿತಿಯ ಮಾಜಿ ಅಧ್ಯಕ್ಷ ಕೆ.ಎ.ಯಾಕುಬ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಂಧಿತರÀ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ದೇಶದಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಕನ್ಹಯ್ಯ ಲಾಲ್ ರನ್ನು ಹತ್ಯೆಗೈದ ದುಷ್ಕರ್ಮಿಗಳು ದೇಶದ ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ಬೆದರಿಕೆಯೊಡ್ಡಿರುವುದು ಖಂಡನೀಯ. ನಮ್ಮಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ಆದರೆ ಪ್ರಧಾನಿ ಸ್ಥಾನವನ್ನು ಗೌರವಿಸಲೇಬೇಕಾಗಿದೆ. ಪ್ರತಿಯೊಬ್ಬ ಪ್ರಜೆ ಪ್ರಧಾನಮಂತ್ರಿಗಳಿಗೆ ಗೌರವ ನೀಡುವ ಸಂಸ್ಕಾರವನ್ನು ಪ್ರಜಾಪ್ರಭುತ್ವ ರಾಷ್ಟç ಭಾರತ ಹೇಳಿಕೊಟ್ಟಿದೆ. ಆದರೆ ಹಂತಕರು ದೇಶ ವಿರೋಧಿ ಕೃತ್ಯವೆಸಗಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಯಾಕೂಬ್, ಕಾನೂನು ಕೈಗೆ ತೆಗೆದುಕೊಳ್ಳುವ ವ್ಯಕ್ತಿಗಳ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳುವ ಮೂಲಕ ದೇಶದ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಒತ್ತಾಯಿಸಿದ್ದಾರೆ.