ಮಡಿಕೇರಿ, ಜೂ. ೩೦: ಕರ್ನಾಟಕದ ಕಬೀರ ಸಂತ ಶಿಶುನಾಳ ಶರೀಫರ ಜನ್ಮದಿನ ಮತ್ತು ಪುಣ್ಯಸ್ಮರಣೆಯ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಜುಲೈ ೩ ರಂದು ಶಿಶುನಾಳ ಶರೀಫರ ತತ್ವ ಪದಗಳ ಆಧಾರಿತ ತತ್ವರಸಾಯನ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಕೊಡಗು ಜಿಲ್ಲೆಯಿಂದ ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ತಂಡವು ವಿದೂಷಿ ಪ್ರೇಮಾಂಜಲಿ ಆಚಾರ್ಯ ಅವರ ನಿರ್ದೇಶನದಲ್ಲಿ ನೃತ್ಯ ಪ್ರದರ್ಶನ ನೀಡಲಿದೆ.