ಮಡಿಕೇರಿ, ಜೂ. ೩೦: ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರಗಳಲ್ಲಿ ಅಭ್ಯಾಸ ಮಾಡುತ್ತಿರುವ ೧೬ ರಿಂದ ೨೪ ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳಿಂದ ಮಾತ್ರ ೨೦೨೨-೨೩ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. ೧೦ ಸಾವಿರಗಳನ್ನು ಶಿಷ್ಯವೇತನ ನೀಡಲಾಗುತ್ತದೆ. ಒಬ್ಬ ಅಭ್ಯರ್ಥಿ ಒಮ್ಮೆ ಮಾತ್ರ ಶಿಷ್ಯವೇತನ ಪಡೆಯಲು ಅರ್ಹರಾಗಿದ್ದಾರೆ. ಅರ್ಜಿಯ ಜೊತೆ ಇತ್ತೀಚಿನ ಪಠ್ಯಕ್ರಮವನ್ನು ಸಹ ನೀಡಲಾಗಿದೆ.
ಅರ್ಜಿಯನ್ನು ಅಕಾಡೆಮಿಯ ಕಚೇರಿ ವೇಳೆಯಲ್ಲಿ (ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ಗಂಟೆವರೆಗೆ) ಉಚಿತವಾಗಿ ಪಡೆಯಬಹುದು. ಅಕಾಡೆಮಿಯ ಅಂತರ್ಜಾಲ ತಾಣ hಣಣಠಿs://sಚಿಟಿgeeಣಚಿಟಿಡಿiಣಥಿಚಿಚಿಛಿಚಿಜemಥಿ.ಞಚಿಡಿಟಿಚಿಣಚಿಞಚಿ.gov.iಟಿನಲ್ಲಿ ಪಡೆದು ಸಲ್ಲಿಸಬಹುದು.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಹೆಸರಿನ ಫೇಸ್ಬುಕ್ ಪುಟದಲ್ಲೂ ಅರ್ಜಿ ಪಡೆಯಬಹುದು. ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿ ಪಡೆಯಬಹುದು.
ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಚಿಸುವವರು ರೂ. ೧೦ ಸ್ಟಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟಾçರ್, ಕರ್ನಾಟಕ ಸಂಗೀತ ನೃತ್ಯ ಅಕಾಡಮಿ, ಕನ್ನಡ ಭವನ, ೨ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-೫೬೦೦೦೨ ಇಲ್ಲಿಗೆ ಕಳುಹಿಸಿಕೊಡಬೇಕಾಗುವುದು.
ಭರ್ತಿ ಮಾಡಿದ ಅರ್ಜಿಗಳನ್ನು ಕಳುಹಿಸಿಕೊಡಲು ತಾ. ೨೫ ಕೊನೆಯ ದಿನವಾಗಿದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟಾçರ್ ಎಸ್.ಹೆಚ್. ಶಿವರುದ್ರಪ್ಪ ತಿಳಿಸಿದ್ದಾರೆ.