ಮಡಿಕೇರಿ, ಜು. ೧: ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿAದ ಪ್ರತಿಭಾ ಪುರಸ್ಕಾರವನ್ನು ಆಯೋಜಿಸುತ್ತಿದೆ.
ಆ ದಿಸೆಯಲ್ಲಿ ೨೦೨೨ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ. ೯೦ ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರದ ಖಾಯಂ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಸಂಘದಿAದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿದಾರರ ತಂದೆ-ತಾಯಿ/ ಪೋಷಕರು ಕಡ್ಡಾಯವಾಗಿ ರಾಜ್ಯ ಸರ್ಕಾರದ ಖಾಯಂ ನೌಕರ ರಾಗಿರಬೇಕು. ವೇತನ ಬಟವಾಡೆ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ, ತಾಲೂಕು, ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ಸೇವಾ ದೃಢೀಕರಣ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸುವುದು. ವಿದ್ಯಾರ್ಥಿಯ ಪೋಷಕರು ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ ನೌಕರರಾಗಿದ್ದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ದೃಢೀಕರಣ ಪತ್ರವಿಲ್ಲದೆ ಸಲ್ಲಿಸಲ್ಪಡುವ ಅರ್ಜಿ ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ತಾ. ೧೫ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂ. ೦೮೦-೨೨೩೫೪೭೮೩/೮೪, ಮತ್ತು ವೆಬ್ ವಿಳಾಸ hಣಣಠಿs://biಣ.ಟಥಿ/ಞsgeಚಿಠಿಡಿಚಿಣhibಚಿ ಠಿuಡಿಚಿsಞಚಿಡಿಚಿ೨೦೨೨ನ್ನು ಸಂರ್ಪಕಿಸಬಹುದು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್ ತಿಳಿಸಿದ್ದಾರೆ.