ಮಡಿಕೇರಿ, ಜೂ.೩೦: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಉಸ್ಮಾನ್ ಹಾಗೂ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಯಾವ ಧರ್ಮವೂ ಹಿಂಸೆಯನ್ನು ಬೆಂಬಲಿಸುವುದಿಲ್ಲ, ಆದರೆ ಉದಯಪುರದಲ್ಲಿ ಧರ್ಮದ ಹೆಸರಿನಲ್ಲಿ ಎಸಗಿರುವ ಅಮಾನವೀಯ ಕೃತ್ಯ ಘೋರ ಅಪರಾಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕ್ರಮಕ್ಕೆ ವೀರಾಜಪೇಟೆ ಕಾಂಗ್ರೆಸ್ ಒತ್ತಾಯ

ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣವನ್ನು ವೀರಾಜಪೇಟೆ ಕಾಂಗ್ರೆಸ್ ವಕ್ತಾರ ಪಿ.ಎಲ್.ಸುರೇಶ್ ಖಂಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭಾರತ ದೇಶದ ಅಹಿಂಸಾವಾದದ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳದ ಮತಾಂಧರಿAದ ಈ ರೀತಿಯ ಕೃತ್ಯ ನಡೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.