ಸೋಮವಾರಪೇಟೆ, ಜೂ.೩೦: ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆ ತಾ. ೩ರಂದು ಕಕ್ಕೆಹೊಳೆ ಸಮೀಪದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಎಚ್.ಎ. ನಾಗರಾಜು ತಿಳಿಸಿದ್ದಾರೆ. ಅಂದು ಸಂಜೆ ೫ ಗಂಟೆಗೆ ನಡೆಯುವ ಸಭೆಯಲ್ಲಿ ಪಕ್ಷದ ಜಿಲ್ಲಾ ಮಟ್ಟದ ಹಿರಿಯ ಮುಖಂಡರು, ಜನಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್ ಸೇರಿದಂತೆ ಎಲ್ಲ್ಲಾ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.