ಕುಶಾಲನಗರ, ಜೂ.೩೦: ಕುಶಾಲನಗರ ಲಾಡ್ಜ್ನಿಂದ ತೆರವುಗೊಳಿಸಿದ ಶೌಚ ತ್ಯಾಜ್ಯವನ್ನು ಲಾರಿ ಮೂಲಕ ಸಾಗಿಸಿ ಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಯೊಂದರಲ್ಲಿ ಸುರಿದ ಘಟನೆ ನಡೆದಿದೆ. ಈ ಸಂದರ್ಭ ಸ್ಥಳೀಯ ಗ್ರಾಮಸ್ಥರು ಲಾರಿಯನ್ನು ತಡೆದು ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಕೆರೆ ಸ್ವಚ್ಛತೆ ಮಾಡುವುದರೊಂದಿಗೆ ಲಾರಿಯ ಮಾಲೀಕರಿಗೆ ದಂಡ ವಿಧಿಸಿದ್ದಾರೆ.

ಕುಶಾಲನಗರ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಕೆಲವು ಲಾಡ್ಜ್ಗಳಿಂದ ಶೌಚ ತ್ಯಾಜ್ಯವನ್ನು ಚರಂಡಿ ಮೂಲಕ ನೇರವಾಗಿ ನದಿಗೆ ಹರಿಸುತ್ತಿದ್ದ ಬಗ್ಗೆ ಪಂಚಾಯಿತಿ ಅಧಿಕಾರಿಗಳು ನೋಟೀಸ್ ನೀಡಿದ ಹಿನ್ನೆಲೆಯಲ್ಲಿ ಈ ಲಾಡ್ಜ್ಗಳ ಮಾಲೀಕರು ಖಾಸಗಿ ಸಕ್ಕಿಂಗ್ ಯಂತ್ರಗಳನ್ನು ಬಳಸಿ ತೆರವುಗೊಳಿಸುವ ಕಾರ್ಯ ನಡೆಸಿದ್ದಾರೆ. ಲಾಡ್ಜ್ವೊಂದರಿAದ ತೆರವುಗೊಳಿಸಿದ ತ್ಯಾಜ್ಯವನ್ನು ಕೊಪ್ಪ ಗ್ರಾಮದ ಗುಡ್ಡೆನಹಳ್ಳಿ ವ್ಯಾಪ್ತಿಯ ಕೆರೆಗೆ ಸುರಿದು ವಿಲೇವಾರಿ ಮಾಡುವ ಕೆಲಸದಲ್ಲಿ ತೊಡಗಿದ ಸಂದರ್ಭ ಅಲ್ಲಿನ ಗ್ರಾಮಸ್ಥರು ವಾಹನವನ್ನು ತಡೆದು ಪ್ರತಿಭಟನೆ ನಡೆಸಿ ಕೊಪ್ಪ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮಾಹಿತಿ ನೀಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಕೊಪ್ಪ ಗ್ರಾಮ ಪಂಚಾಯಿತಿ ಅಧಿಕಾರಿ ಸತೀಶ್ ಮತ್ತು ಸಿಬ್ಬಂದಿಗಳು ಕೆರೆಯನ್ನು ಸ್ವಚ್ಛಗೊಳಿಸುವ ಕ್ರಮಕ್ಕೆ ಮುಂದಾಗಿದ್ದು, ಲಾರಿ ಮಾಲೀಕರಿಗೆ ೬ ಸಾವಿರ ದಂಡ ವಿಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.