ಮುಂಬೈ, ಜೂ. ೩೦: ಮಹಾರಾಷ್ಟçದಲ್ಲಿ ಕಳೆದ ಎರಡು ವಾರಗಳಿಂದ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಅಂತ್ಯಗೊAಡಿದೆ. ಉದ್ಧವ್ ಠಾಕ್ರೆ ನೇತೃತ್ವದ ೩೧ ತಿಂಗಳ ಮಹಾ ಆಘಾದಿ ಸರ್ಕಾರ ಪತನವಾಗಿ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿನ ನೂತನ ಶಿವಸೇನಾ-ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಜಭವನದಲ್ಲಿ ಇಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿಯಾಗಿ, ಬಿಜೆಪಿಯ ದೇವೇಂದ್ರ ಫಡ್ನವೀಸ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಪ್ರಮಾಣ ವಚನ ಬೋಧಿಸಿದರು. ಈ ಮೂಲಕ ಒಂದು ಕಾಲದಲ್ಲಿ ಆಟೋ ಡ್ರೆöÊವರ್ ಆಗಿದ್ದ ಏಕನಾಥ್ ಶಿಂಧೆ, ಶಿವಸೇನಾ ಮುಖ್ಯಸ್ಥ ಹಾಗೂ ತನ್ನ ಗುರು ಉದ್ಧವ್ ಠಾಕ್ರೆಯನ್ನು ರಾಜಕಾರಣದಲ್ಲಿ ಹಿಂದಿಕ್ಕಿ ಇದೀಗ ಮಹಾರಾಷ್ಟçದ ಸಿಎಂ ಆಗಿ ಹೊರಹೊಮ್ಮಿದ್ದಾರೆ. ನಾಲ್ಕು ಬಾರಿ ಶಾಸಕರು, ಎರಡು ಬಾರಿ ಸಚಿವರಾಗಿದ್ದ ಶಿಂಧೆ, ಜನ ಹಾಗೂ ಕಾರ್ಯಕ್ರಮ ಸಂಘಟಿಸುವ ಕೌಶಲ್ಯದೊಂದಿಗೆ ಹಂತ ಹಂತವಾಗಿ ರಾಜಕೀಯದಲ್ಲಿ ಉನ್ನತ ಹುದ್ದೆಗೇರುವಲ್ಲಿ ಯಶಸ್ವಿಯಾಗಿದ್ದಾರೆ.

ಸೇನಾ ಕ್ಯಾಂಪ್‌ನ ಬಳಿ ಸಂಭವಿಸಿದ ಭೂಕುಸಿತದಲ್ಲಿ ೭ ಮಂದಿ ಸಾವು

ನವದೆಹಲಿ, ಜೂ. ೨೦: ಮಣಿಪುರದ ನೋನಿ ಜಿಲ್ಲೆಯ ತುಪುಲ್ ರೈಲು ನಿಲ್ದಾಣದಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಭೀಕರ ಭೂಕುಸಿತದಲ್ಲಿ ೭ ಮಂದಿ ಸಾವನ್ನಪ್ಪಿದ್ದು ನಂತರ ಕನಿಷ್ಟ ೪೫ ಭಾರತೀಯ ಸೇನಾ ಸಿಬ್ಬಂದಿ ಮತ್ತು ಹಲವು ಜನರು ನಾಪತ್ತೆಯಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಅವಶೇಷಗಳಲ್ಲಿ ಸಿಲುಕಿರುವುದರಿಂದ ಮುಂದೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಜಿರಿಬಾಮ್‌ನಿಂದ ರಾಜಧಾನಿ ಇಂಫಾಲ್‌ಗೆ ರೈಲು ಮಾರ್ಗ ನಿರ್ಮಾಣ ಹಿನ್ನೆಲೆ ಪ್ರಾದೇಶಿಕ ಸೇನಾ ಶಿಬಿರ ಅಲ್ಲಿ ರಕ್ಷಣೆಗೆ ನಿಂತಿತ್ತು. ಪ್ರಸ್ತುತ ಹದಿಮೂರು ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಏಳು ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ನೋನಿ ಜಿಲ್ಲೆಯ ಎಸ್‌ಡಿಒ ಸೊಲೊಮನ್ ಎಲ್ ಫಿಮೇಟ್ ಹೇಳುತ್ತಾರೆ. ಘಟನೆ ಕುರಿತಂತೆ ಆಘಾತ ವ್ಯಕ್ತಪಡಿಸಿರುವ ಸಿಎಂ ಬಿರೇನ್ ಸಿಂಗ್, ತುಪುಲ್‌ನಲ್ಲಿ ಇಂದು ಸಂಭವಿಸಿದ ಭೂಕುಸಿತದ ಪರಿಸ್ಥಿತಿಯನ್ನು ನಿರ್ಣಯಿಸಲು ತುರ್ತು ಸಭೆಯನ್ನು ಕರೆಯಲಾಗಿದೆ. ಈಗಾಗಲೇ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ವೈದ್ಯರೊಂದಿಗೆ ಆಂಬ್ಯುಲೆನ್ಸ್ಗಳನ್ನು ಸಹ ಕಳುಹಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಮಣಿಪುರದ ತುಪುಲ್ ರೈಲು ನಿಲ್ದಾಣದ ಬಳಿ ಭೂಕುಸಿತದ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಇನ್ನೂ ೨ ತಂಡಗಳು ತುಪುಲ್‌ಗೆ ತೆರಳುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ

ಬೆಂಗಳೂರು, ಜೂ. ೩೦: ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜುಲೈ ೨ ರಂದು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ನೇಮಕ ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಆರಾಧೆ ಅವರನ್ನು ನೇಮಿಸಿರುವ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ. ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ ೩ ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನ್ಯಾಯಮೂರ್ತಿ ಅವಸ್ಥಿ ಅವರು ಜುಲೈ ೨ರಂದು ತಮ್ಮ ೬೨ನೇ ಹುಟ್ಟುಹಬ್ಬಕ್ಕೂ ಮುನ್ನಾದಿನದಂದು ನಿವೃತ್ತರಾಗಲಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮರ್ತಿಗಳು ೬೫ನೇ ವರ್ಷ ವಯಸ್ಸಿಗೆ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳು ೬೨ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.

ಸಾಲುಮರದ ತಿಮ್ಮಕ್ಕನಿಗೆ ‘ಪರಿಸರ ರಾಯಭಾರಿ' ಗೌರವ

ಬೆಂಗಳೂರು, ಜೂ. ೩೦: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡಿ, ಜೊತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಸಾಲುಮರದ ತಿಮ್ಮಕ್ಕನವರ ೧೧೧ರ ಜನ್ಮದಿನದ ಸಂಭ್ರಮ ಹಾಗೂ ಸಾಲುಮರದ ತಿಮ್ಮಕ್ಕ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಬೊಮ್ಮಾಯಿ ಅವರು, ರಾಜ್ಯದ ಉದ್ದಕ್ಕೂ ಪರಿಸರ ರಕ್ಷಣೆಯ ಪ್ರಚಾರ ಮಾಡಲು ಈ ಸ್ಥಾನಮಾನ ನೀಡಲಾಗಿದೆ. ಹೊರ ರಾಜ್ಯಕ್ಕೆ ತೆರಳಿದರೆ ಸರ್ಕಾರದಿಂದಲೇ ಖರ್ಚು ಭರಿಸಲಾಗುವುದು. ವಾರ್ತಾ ಇಲಾಖೆಯಿಂದ ಸಾಲುಮರದ ತಿಮ್ಮಕ್ಕ ಅವರ ವೆಬ್‌ಸೀರಿಸ್ ಮಾಡಲಾಗುವುದು. ಅವರಿಗೆ ಬೇಲೂರು ತಾಲೂಕಿನಲ್ಲಿ ಹತ್ತು ಎಕರೆ ಭೂಮಿ ಮಂಜೂರು ಮಾಡಲಾಗುವುದು. ಬೆಂಗಳೂರಿನಲ್ಲಿ ಬಿಡಿಎ ನಿವೇಶನ ನೀಡಲಾಗಿದೆ. ಆ ನಿವೇಶನದಲ್ಲಿ ಮನೆ ನಿರ್ಮಿಸಿ ಕೊಡಲಾಗುವುದು ಎಂದು ಹೇಳಿದರು.